Kundapra.com ಕುಂದಾಪ್ರ ಡಾಟ್ ಕಾಂ

ಮರವಂತೆ ಬಡಾಕೆರೆ ಸೊಸೈಟಿ: ಧನ್ವಿ ಪೂಜಾರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮಲೇಷ್ಯಾದ ಕೌಲಾಲಂಪುರದಲ್ಲಿ ನಡೆದಿದ್ದ ವಿಶ್ವ ಯೋಗ ಸ್ಪರ್ಧೆಯಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಗಳಿಸಿ ಸಾಧನೆ ಮಾಡಿದ ಮರವಂತೆಯ ಬಾಲ ಯೋಗಪಟು ಧನ್ವಿ ಪೂಜಾರಿಗೆ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಧನ್ವಿ ಪೂಜಾರಿಗೆ ಅಭಿನಂದಿಸಿದರು. ಈ ಸಂದರ್ಭ ಸಂಸ್ಥೆಯ ಉಪಾಧ್ಯಕ್ಷ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ಭೋಜ ನಾಯ್ಕ್, ಜಗದೀಶ್ ಪಿ. ಪೂಜಾರಿ, ರಾಮಕೃಷ್ಣ ಖಾರ್ವಿ, ಪ್ರಕಾಶ ದೇವಾಡಿಗ, ನಾಗಮ್ಮ, ಮಂಜು ಪೂಜಾರಿ, ಮುಖಂಡ ಮದನ್‌ಕುಮಾರ್ ಉಪ್ಪುಂದ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ ಮಡಿವಾಳ ಹಾಗೂ ಸಿಬ್ಬಂಧಿಗಳು ಇದ್ದರು.

Exit mobile version