ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ರಸ್ತೆಯ ವಿಜಯಪರದಲ್ಲಿ ಪ್ರಗತಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಪದವಿಪೂರ್ವ ಕಾಲೇಜು ಬಾಲಕಿಯರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಕುಂದಾಪುರದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಬಾಲಕಿಯರು ಪ್ರತಿನಿಧಿಸಿದ್ದ ಉಡುಪಿ ತಂಡ ಪ್ರಥಮ ಸ್ಥಾನ ಗಳಿಸಿದೆ.
ಸೌಮ್ಯ , ರಕ್ಷಿತಾ ಖಾರ್ವಿ, ಮನಿಷಾ, ಅನುಷಾ ಮತ್ತು ಗೌತಮಿ ಭಾಗವಹಿಸಿದ್ದರು. ವಿಜೇತರಿಗೆ ಪ್ರಗತಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಎನ್ ರಮೇಶ್ ಟ್ರೋಫಿ ನೀಡಿದರು. ಸರಸ್ವತಿ ವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಉಪಸ್ಥಿತರಿದ್ದರು.