Kundapra.com ಕುಂದಾಪ್ರ ಡಾಟ್ ಕಾಂ

ಗರಡಿ ಕಾಷ್ಠಶಿಲ್ಪ ಗಮನ ಸೆಳೆಯುವಂತಿದೆ: ಬಿ. ಎನ್. ಶಂಕರ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸುಂದರ ಕಾಷ್ಠಶಿಲ್ಪದೊಂದಿಗೆ ನಿರ್ಮಾಣವಾಗುತ್ತಿರುವ ಕೋಟಿ ಚೆನ್ನಯ್ಯರ ಕೊನೆಯ ಗರಡಿಯು ಜೀರ್ಣೋದ್ಧಾರದ ಬಳಿಕ ಕಾರಣಿಕ ಸ್ಥಳವಾಗಿ ಮಾರ್ಪಡಲಿದೆ ಎಂದು ಶ್ರೀ ವಿಶ್ವನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಕಟಪಾಡಿ ಬಿ. ಎನ್. ಶಂಕರ ಪೂಜಾರಿ ಹೇಳಿದರು.

ಅವರು ಯಡ್ತರೆ ಗ್ರಾಮದ ನಾಕಟ್ಟೆಯಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಭೇಟಿ ನೀಡಿ ಬಳಿಕ ಮಾತನಾಡಿ ಇಲ್ಲಿನ ಪ್ರತಿ ಕೆತ್ತನೆಯೂ ಗಮನ ಸೆಳೆಯುವಂತಿದೆ. ಶೀಘ್ರವಾಗಿ ಭಕ್ತರ ಸಹಕಾರದಿಂದ ಜೀರ್ಣೋದ್ಧಾರ ಕಾರ್ಯ ಪೂರ್ಣಗೊಳ್ಳಲಿ ಎಂದರು.

ಈ ಸಂದರ್ಭ ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ದನ ತೋನ್ಸೆ, ಗರಡಿ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಸ್ಥಳೀಯರಾದ ಸುಬ್ರಹ್ಮಣ್ಯ ಬಿಜೂರು, ಸೀತಾರಾಮ್, ಅಣ್ಣಪ್ಪ ಪೂಜಾರಿ ಯಡ್ತರೆ ಇದ್ದರು.

Exit mobile version