ಕುಂದಾಪ್ರ ಡಾಟ್ ಕಾಂ’ ಸುದ್ದಿ
ಕುಂದಾಪುರ: ‘ದೇಶದಲ್ಲಿನ ಸ್ವಾರ್ಥ ಹಾಗೂ ರಾಜಕೀಯ ಉದ್ದೇಶಗಳಿಗಾಗಿ ಮಹಾತ್ಮ ಗಾಂಧೀಜಿ ಅವರನ್ನು ಒಂದು ರಾಜಕೀಯ ಪಕ್ಷ ಬಳಸಿಕೊಂಡಿದೆ. ಆದರೆ, ಗಾಂಧೀಜಿ ಕಂಡಿದ್ದ ಕನಸುಗಳನ್ನು ನನಸು ಮಾಡುವ ಯಾವ ಪ್ರಯತ್ನಗಳೂ ಈವರೆಗೂ ಪರಿಣಾಮಕಾರಿಯಾಗಿ ನಡೆದಿಲ್ಲ’ ಎಂದು ಉಡುಪಿ–ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದರು.
ಜನ್ನಾಡಿಯಲ್ಲಿ ಬುಧವಾರ ಮಹಾತ್ಮ ಗಾಂಧೀಜಿ ಅವರ 150 ನೇ ಜನ್ಮ ದಿನಾಚರಣೆ ಅಂಗವಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜನ್ನಾಡಿಯಿಂದ ಬಿದ್ಕಲ್‌ಕಟ್ಟೆಯವರೆಗೆ ನಡೆದ ’ಮಹಾತ್ಮ ಗಾಂಧಿ ಸಂಕಲ್ಪ ಯಾತ್ರೆ’ ನೇತೃತ್ವ ವಹಿಸಿ ಅವರು ಮಾತನಾಡಿದರು.
ಸ್ವಚ್ಛ ಭಾರತ, ಪ್ಲಾಸ್ಟಿಕ್ ಮುಕ್ತ ಭಾರತ, ಶೌಚಾಲಯ ನಿರ್ಮಾಣ ದಂತಹ ಕಾರ್ಯಕ್ರಮಗಳ ಮೂಲಕ ದೇಶವಾಸಿಗಳ ಗಮನ ಸೆಳೆದಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮಹಾತ್ಮ ಗಾಂಧೀಜಿ ಕಂಡಿದ್ದ ರಾಮರಾಜ್ಯದ ಕನಸನ್ನು ನನಸು ಮಾಡುವಲ್ಲಿ ಅವಿರತವಾಗಿ ದುಡಿ ವ ಪ್ರಧಾನಿ ಮೋದಿ ಅವರಿಗೆ ದೇಶದ ಎಲ್ಲ ವರ್ಗದ ಜನರು ಸ್ಪಂದಿಸಬೇಕು ಎಂದರು.
ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಕಾಡೂರು ಸುರೇಶ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಪ್ರತಾಪ್ ಹೆಗ್ಡೆ ಮಾರಾಳಿ, ಶ್ರೀಲತಾ ಸುರೇಶ್ ಶೆಟ್ಟಿ, ಸುಪ್ರೀತಾ ಉದಯ್ ಕುಲಾಲ್, ಬಿಜೆಪಿ ಪಕ್ಷದ ಮುಖಂಡರಾದ ಎ.ಕಿರಣ್‌ಕುಮಾರ ಕೊಡ್ಗಿ, ಕುತ್ಯಾರು ನವೀನ್ ಶೆಟ್ಟಿ, ಸಂಧ್ಯಾ ರಮೇಶ್, ಶಂಕರ ಅಂಕದಕಟ್ಟೆ, ಸದಾನಂದ ಬಳ್ಕೂರು ಇದ್ದರು.