Kundapra.com ಕುಂದಾಪ್ರ ಡಾಟ್ ಕಾಂ

ಈಜು ಸ್ವರ್ಧೆ: ನಾಗರಾಜ ಖಾರ್ವಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಾಸ್ಟರ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯಮಟ್ಟಡ ಈಜು ಸ್ವರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಗುಜ್ಜಾಡಿ ಗ್ರಾಮದ ಕಂಚುಗೋಡಿನ ನಾಗರಾಜ ಖಾರ್ವಿ ಅವರು ೫೦ ಮೀ ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಚಿನ್ನದ ಪದಕ, ೧೦೦ಮೀ ಬ್ಯಾಕ್ ಸ್ಟ್ರೋಕ್‌ನಲ್ಲಿ ಚಿನ್ನದ ಪದಕ ಹಾಗೂ ೨೦೦ಮೀ ವೈಯಕ್ತಿಕ ಮೆಡ್ಲೆಯಲ್ಲಿ ಚಿನ್ನದ ಪದಕ ವಿಜೇತರಾಗಿ ಗುಜರಾತಿನ ವಡೋದರದಲ್ಲಿ ೨೦೨೦ರ ಫೆಬ್ರವರಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಈಜುಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.

ಪ್ರಸ್ತುತ ಬಂಟ್ವಾಳ ಸ.ಹಿ.ಪ್ರಾ ಶಾಲೆಯಲ್ಲಿ ಪದವೀಧರ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿರುವ ನಾಗರಾಜ ಖಾರ್ವಿ ಅವರು ಸ.ಹಿ.ಪ್ರಾ.ಶಾಲೆ ಕಂಚುಗೋಡು, ಸ.ಹಿ.ಪ್ರಾ ಶಾಲೆ ಗುಜ್ಜಾಡಿ ಮತ್ತು ಸರಸ್ವತಿ ವಿದ್ಯಾಲಯ ಗಂಗೊಳ್ಳಿಯ ಹಳೆವಿದ್ಯಾರ್ಥಿಯಾಗಿದ್ದಾರೆ. ರೇಷ್ಮೆ ಇಲಾಖೆಯ ಬಿ. ಕೆ. ನಾಯ್ಕ್ ರವರು ತರಬೇತಿ ನೀಡಿರುತ್ತಾರೆ.

Exit mobile version