Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಹಿರಿಯ ನಾಗರಿಕರ ವೇದಿಕೆ: ವೈಜ್ಞಾನಿಕ ಕೃಷಿ ಉಪನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಹಿರಿಯ ನಾಗರಿಕರ ವೇದಿಕೆ ವತಿಯಿಂದ ಬಂಕೇಶ್ವರದ ಮಹಾಂಕಾಳಿ ದೇವಸ್ಥಾನದ ಸಭಾಭವನದಲ್ಲಿ ಮಾಸಿಕ ಕಾರ್ಯಕ್ರಮ ಜರುಗಿತು.

ಕೃಷಿ ಅಧ್ಯಯನ ಪ್ರವಾಸಕ್ಕಾಗಿ ಇಸ್ರೆಲ್‌ಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ ಭಾಗವಹಿಸಿದ ಖಂಬದಕೋಣೆ ರೈತ ಸೇವಾ ಸಹಕಾರಿ ಸಂಸ್ಥೆಯ ಅಧ್ಯಕ್ಷ, ಕೃಷಿಕ ಪ್ರಕಾಶ್ಚಂದ್ರ ಶೆಟ್ಟಿ ಅವರು ವೈಜ್ಞಾನಿಕ ಕೃಷಿಯ ಕುರಿತು ಮಾತನಾಡಿ, ಕೃಷಿ ಕ್ಷೇತ್ರದಲ್ಲಿ ಯಶಸ್ಸನ್ನು ಕಾಣಬೇಕಾದರೆ ಅದಕ್ಕೆ ಪೂರಕವಾಗಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವುದರ ಜೊತೆ ಜೊತೆಗೆ ಮಿಶ್ರ ಬೆಳೆಗಳಿಗೂ ಆದ್ಯತೆಗೆ ಒತ್ತು ಕೊಡಬೇಕು ಆಗ ನಮಗೆ ಸಮತೋಲನವಾದ ಆದಾಯ ಮೂಲ ಸದಾ ಪಡೆಯಲು ಸಾಧ್ಯವಾಗುವುದು ಎಂದು ಅಭಿಪ್ರಾಯ ಪಟ್ಟರು.

ವೇದಿಕೆಯ ಅಧ್ಯಕ್ಷ ಎಚ್. ವಸಂತ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕವಿ ಪ್ರಶಸ್ತಿ ಪುರಸ್ಕೃತ ಪುಂಡಲೀಕ ನಾಯಕ್ ರವರನ್ನು ಹಿರಿಯ ನಾಗರಿಕರ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು. ನಾಗರಿಕರ ವೇದಿಕೆಯ ಉಪಾಧ್ಯಕ್ಷ ಶ್ರೀನಿವಾಸ ಮದ್ದೋಡಿ, ಕಾರ್ಯದರ್ಶಿ ಸಂಜೀವ ಆಚಾರ್ಯ ಕಳವಾಡಿ, ನಿವೃತ್ತ ಮುಖ್ಯೋಪಾಧ್ಯಾಯ ತಿಮ್ಮಪ್ಪಯ್ಯ ಬೈಂದೂರು ವೇದಿಕೆಯಲ್ಲಿ ಇದ್ದರು. ನಿವೃತ್ತ ಅಧ್ಯಾಪಕ ರಾಮ ಶೇರುಗಾರ ಎಲ್ಲರಿಗೂ ವಂದಿಸಿದರು.

Exit mobile version