Kundapra.com ಕುಂದಾಪ್ರ ಡಾಟ್ ಕಾಂ

ಕೋಟಿ ಚೆನ್ನಯ್ಯರ ಪರಂಪರೆ ನೆನಪಿಸುವಂತೆ ಗರಡಿ ನಿರ್ಮಾಣ: ಸಚಿವ ಶ್ರೀನಿವಾಸ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕೋಟಿ ಚೆನ್ನಯ್ಯರ ಪರಂಪರೆ ಹಾಗೂ ಕಟ್ಟುಪಾಟುಗಳಿಗೆ ಅನುಗುಣವಾಗಿ ಗರಡಿ ಜೀರ್ಣೋದ್ಧಾರಗೊಳ್ಳುತ್ತಿದೆ. ಕೋಟಿ ಚೆನ್ನಯ್ಯರ ಕೊನೆಯ ಗರಡಿ ಎನ್ನಲಾದ ನಾಕಟ್ಟೆಯ ಗರಡಿಯು ಸುಂದರವಾಗಿ, ಕಲಾತ್ಮಕವಾಗಿ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿ ಎಂದು ರಾಜ್ಯ ಮುಜರಾಯಿ ಬಂದರು ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಯಡ್ತರೆ ಗ್ರಾಮದ ನಾಕಟ್ಟೆಯಲ್ಲಿ ಜೀಣೋದ್ಧಾರಗೊಳ್ಳುತ್ತಿರುವ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಭೇಟಿ ನೀಡಿ, ಕಾಮಗಾರಿಯ ಪ್ರಗತಿ ವೀಕ್ಷಿಸಿದ ಬಳಿಕ ಮಾತನಾಡಿ ಗರಡಿ ಪೂರ್ಣಗೊಳ್ಳುವ ಹಂತದಲ್ಲಿರುವುದರಿಂದ ಸರಕಾರದಿಂದ ಶೀಘ್ರವಾಗಿ ಏನೇನು ಸಹಾಯ ಮಾಡಬಹುದು ಎಂಬುದನ್ನು ಅರಿತು ಮೊದಲ ಹಂತದಲ್ಲಿಯೇ ಪಟ್ಟಿಯಲ್ಲಿ ಸ್ವಲ್ಪ ಅನುದಾನ ಪ್ರಕಟಿಸಿ, ಹೆಚ್ಚಿನ ಬೇಡಿಕೆಯನ್ನು ರಾಜ್ಯ ಸರಕಾರದ ಮುಂದಿರಿಸುವ ಕೆಲಸ ಮಾಡಲಾಗುವುದು ಎಂದರು.

ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಬಾಬು ಶೆಟ್ಟಿ ತಗ್ಗರ್ಸೆ, ಸುರೇಶ ಬಟವಾಡಿ, ತಾಲೂಕು ಪಂಚಾಯತ್ ಸದಸ್ಯರುಗಳಾದ ಪುಪ್ಪರಾಜ ಶೆಟ್ಟಿ, ಮಾಲಿನಿ ಕೆ., ಮಹೇಂದ್ರ ಪೂಜಾರಿ, ಬೈಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾಗೀರಥಿ, ಬೈಂದೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಕಾರ್ಯದರ್ಶಿ ಕಿಶೋರ್ ಸಸಿಹಿತ್ಲು, ಸ್ಥಳೀಯರಾದ ಜಗನ್ನಾಥ ಶೆಟ್ಟಿ, ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕ ಕುಟುಂಬದ ಮಂಜುನಾಥ ಮೇಲ್ಹಿತ್ಲು ಮೊದಲಾದವರು ಇದ್ದರು.

Exit mobile version