Kundapra.com ಕುಂದಾಪ್ರ ಡಾಟ್ ಕಾಂ

ಮನೋವೃತ್ತಿ ಬದಲಾವಣೆಯಿಂದ ಬೆಳವಣಿಗೆ ಸಾಧ್ಯ

ಕುಂದಾಪುರ: ನಕರಾತ್ಮಕ ಮನೋವೃತ್ತಿಯನ್ನು ಬದಲಾಯಿಸಿಕೊಳ್ಳಬೇಕು. ಯುವಕರು ದೇಶವನ್ನು ಕಟ್ಟುವವರಾಗಬೇಕು. ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸ್ಪೂರ್ತಿಯನ್ನು ತುಂಬಿ ಹೃದಯ ವೈಶಾಲ್ಯತೆಯನ್ನು ಬೆಳಸಿ, ಸತ್ಯ ಪ್ರಾಮಾಣಿಕತೆ ಮತ್ತು ಪ್ರತಿಯೊಂದು ಕೆಲಸಕ್ಕೂ ನಾನು ತಯಾರಾಗಿದ್ದೇನೆ ಎನ್ನುವುದನ್ನು ಕಲಿಸಿಕೊಡುತ್ತದೆ. ಎನ್.ಎಸ್.ಎಸ್ ಲಾಂಛನ ಪ್ರತಿಬಿಂಬಿಸುವ ಆದರ್ಶಗಳು ಮತ್ತು ಮೌಲ್ಯಗಳನ್ನು ವಿದ್ಯಾರ್ಥಿಗಳು ಸರಿಯಾಗಿ ಅರ್ಥ ಮಾಡಿಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿಯ ಪ್ರಾಂಶುಪಾಲರಾದ ಪ್ರೋ.ರಾಧಕೃಷ್ಣ ಶೆಟ್ಟಿ ಹೇಳಿದರು.

ಅವರು ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ಬ್ಯಾರೀಸ್ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ದೋಮ ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎನ್. ಎಸ್.ಎಸ್ ಯೋಜನಾಧಿಕಾರಿ ವಿದ್ಯಾಧರ ಪೂಜಾರಿ ಪ್ರಸ್ತಾವಿಕ ಮಾತನಾಡಿದರು. ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಅರ್ಪಿತಾ ಸ್ವಾಗತಿಸಿದರು, ಶ್ರೇಯಾ ವಂದಿಸಿದರು, ತೃತೀಯ ಬಿ.ಕಾಂ ವಿದ್ಯಾರ್ಥಿನಿ ರೋಶನಿ ಕಾರ್ಯಕ್ರಮ ನಿರೂಪಿಸಿದರು.

Exit mobile version