Kundapra.com ಕುಂದಾಪ್ರ ಡಾಟ್ ಕಾಂ

ಗುಡ್ಡಟ್ಟುವಿನಲ್ಲಿ ಬೋನಿಗೆ ಬಿದ್ದ ಚಿರತೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಯಡಾಡಿ-ಮತ್ಯಾಡಿ ಗ್ರಾಮದ ಗುಡ್ಡಟ್ಟು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಯದ ವಾತಾವರಣ ಸೃಷ್ಟಿಸಿದ್ದ ಚಿರತೆಯೊಂದು ಮಂಗಳವಾರ ರಾತ್ರಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಬಿದ್ದಿದೆ.

ಗುಡ್ಡಟ್ಟು ಭಾಗದಲ್ಲಿ ಚಿರತೆ ಸಾಕಷ್ಟು ಉಪಟಳ ನೀಡುತ್ತಿದೆ ಎಂಬ ಗ್ರಾಮಸ್ಥರ ದೂರಿನ ಹಿನ್ನೆಲೆಯಲ್ಲಿ ಬೋನು ಇರಿಸಿದ್ದ ಶಂಕರನಾರಾಯಣ ವಲಯದ ಅರಣ್ಯಾಧಿಕಾರಿಗಳು, ಸುಮಾರು ಐದು ವರ್ಷ ಪ್ರಾಯದ ಗಂಡು ಚಿರತೆಯನ್ನು ಸುರಕ್ಷಿತವಾಗಿ ರಕ್ಷಿಸಿ ಅಭಯಾರಣ್ಯಕ್ಕೆ ರವಾನಿಸಿದ್ದಾರೆ.

Exit mobile version