Kundapra.com ಕುಂದಾಪ್ರ ಡಾಟ್ ಕಾಂ

ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನ: ಶ್ರೇಯಸ್‌ಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇತ್ತಿಚಿಗೆ ಹಾಸನದಲ್ಲಿ ನಡೆದ ಅಖಿಲ ಭಾರತ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಉಡುಪಿ ಜಿಲ್ಲೆಯಿಂದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಬೈಂದೂರು ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಅವರನ್ನು ಸನ್ಮಾನಿಸಲಾಯಿತು.

ಶ್ರೇಯಸ್‌ನ ಕರಾಟೆ ಹಾಗೂ ನೃತ್ಯ ಕ್ಷೇತ್ರದ ಸಾಧನೆಯನ್ನು ಪರಿಗಣಿಸಿ ಸಮ್ಮೇಳನದಲ್ಲಿ ಸನ್ಮಾನಿಸಲಾಯಿತು. ಈತ ಬೈಂದೂರು ತಾಲೂಕಿನ ಯಡ್ತರೆ ಸಸಿಹಿತ್ಲು ಮನೆಯ ಶೋಭಾ ಹಾಗೂ ಸುಧಾಕರ ದಂಪತಿಗಳ ಪುತ್ರ.

 

Exit mobile version