ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಲೆ ಸಂಗೀತದ ಆಸ್ವಾದನೆಯಿಂದ ಮನಸ್ಸು ಉಲ್ಲಾಸಗೊಳ್ಳುವುದಲ್ಲದೇ ಸದಾ ಚಟುವಟಿಕೆಯಿಂದ ಕೂಡಿರಲು ಸಾಧ್ಯವಾಗುತ್ತದೆ. ಸೃಜನಶೀಲ ಕಲೆಗಳು ಸೂಕ್ಷ್ಮಕಾಯದ ಬೆಳವಣಿಗೆ ಪೂರಕವಾದವುಗಳು ಎಂದು ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಧ್ಯಾಯ ಬಿ. ವಿಶ್ವೇಶ್ವರ ಅಡಿಗ ಹೇಳಿದರು.
ಅವರು ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ರಂಗಮಂಟಪದಲ್ಲಿ ಬುಧವಾರ ಲಾವಣ್ಯ ರಿ. ಬೈಂದೂರು ಆಶ್ರಯದಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ, ವಿ. ಆರ್. ಬಾಲಚಂದ್ರ ಮುಂಬೈ ಅವರ ಸಹಯೋಗದೊಂದಿಗೆ ಆಯೋಜಿಸಲಾದ ರಂಗಕರ್ಮಿ ಬಿ. ಸೀತಾರಾಮ ಶೆಟ್ಟಿ ಕೂರಾಡಿ ಸಂಸ್ಮರಣೆಯ ನೀನಾಸಂ ತಿರುಗಾಟ – 2019 ನಾಟಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ಲಾವಣ್ಯ ರಿ. ಬೈಂದೂರು ಅಧ್ಯಕ್ಷ ಎಚ್. ಉದಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಧ್ಯಾಯರಾ ಜನಾರ್ದನ ಉಪಸ್ಥಿತರಿದ್ದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ.ಜಿ ಮೋಹನದಾಸ್ ಅವರನ್ನು ಅಭಿನಂಧಿಸಲಾಯಿತು.
ಲಾವಣ್ಯದ ಗಿರೀಶ್ ಬೈಂದೂರು ಸ್ವಾಗತಿಸಿ, ಕಾರ್ಯದರ್ಶಿ ಮೂರ್ತಿ ಬೈಂದೂರು ವಂದಿಸಿದರು. ಸುಬ್ರಹ್ಮಣ್ಯ ಜಿ. ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು. ಗಿರೀಶ್ ಕಾರ್ನಾಡ್ ರಚನೆಯ, ಬಿ.ಆರ್. ವೆಂಕಟರಮಣ ಐತಾಳ್ ನಿರ್ದೇಶನದ ರಾಕ್ಷಸ ತಂಗಡಿ ನಾಟಕ ಪ್ರದರ್ಶನಗೊಂಡಿತು.