Kundapra.com ಕುಂದಾಪ್ರ ಡಾಟ್ ಕಾಂ

ಭಂಡಾರ್ಕಾರ‍್ಸ್ ಕಾಲೇಜಿನಲ್ಲಿ ಪರಿಸರ, ಆರೋಗ್ಯ ಜಾಗೃತಿ ಉಪನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ‍್ಸ್ ಕಾಲೇಜಿನಲ್ಲಿ ಮಹಿಳಾ ವೇದಿಕೆ ಮತ್ತು ಯುತ್‌ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕೆ ಮುಖ್ಯಅತಿಥಿಯಾಗಿ ಭಾಗವಹಿಸಿಸದ್ದ ಕುಂದಾಪುರದ ಮನಿಷ್ ಆಸ್ಪತ್ರೆಯ ವೈದ್ಯರಾದ ಡಾ. ಪ್ರಮೀಳಾ ನಾಯಕ್ ಮಾತನಾಡಿ ಜಾಗತಿಕ ವ್ಯವಸ್ಥೆಯಲ್ಲಿ ಪರಿಸರ ಮಾಲಿನ್ಯ, ಪ್ಲಾಸ್ಟಿಕ್ ನಿರ್ಮೂಲನೆ ಮತ್ತು ಮಾದಕ ದ್ರವ್ಯಗಳ ದುಷ್ಪರಿಣಾಮ ಮತ್ತು ಮಹಿಳಾ ಆರೋಗ್ಯದ ಕುರಿತು ವಿಶೇಷ ಮಾಹಿತಿ ನೀಡಿದರು.

ನಮ್ಮ ನಮ್ಮಲ್ಲಿ ಜಾಗೃತಿ ಮೂಡಬೇಕು. ಪ್ರಸ್ತುತದ ಜಗತ್ತಿನಲ್ಲಿ ಪರಿಸರ ಮಾಲಿನ್ಯದಿಂದಾಗಿ ಶುದ್ಧ ಆಹಾರ ವಾಯು ಮತ್ತು ನೀರು ಸಿಗುವುದು ದುಸ್ತರವಾಗಿದೆ. ಇಂತಹ ವಿಷಮ ಸ್ಥಿತಿಯಲ್ಲಿ ನಾವಿರುವಾಗ ನಾವು ಪರಿಸರ ಉಳಿಸಿಕೊಳ್ಳುವತ್ತ ಗಮನಹರಿಸಬೇಕಾಗಿದೆ. ಅದಕ್ಕಾಗಿ ಹಲವು ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಅನಿವಾರ್ಯತೆ ಇದೆ ಎಂದು ತಿಳಿಸಿದರಲ್ಲದೇ ಮಹಿಳೆಯರು ತಮ್ಮ ಆರೋಗ್ಯವನ್ನು ಕಾಯ್ದುಕೊಳ್ಳುವುದು ಮತ್ತು ಕೆಲವು ಸರಳ ಮಾರ್ಗಗಳನ್ನು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಹಿಳಾ ವೇದಿಕೆಯ ಸಂಚಾಲಕರಾದ ಡಾ. ಯಶವಂತಿ ಕೆ. ಮತ್ತು ಸದಸ್ಯರು ಮತ್ತುಯುತ್ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಣಿ ವಿದ್ಯಾರಾಣಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕೀರ್ತಿ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿ ವಂದಿಸಿದರು.

Exit mobile version