ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯ ನೂತನ ಎಸ್ಪಿಯಾಗಿ ಐಪಿಎಸ್ ಅಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ಅವರನ್ನು ನೇಮಕಗೊಳಿಸಿರುವ ಕರ್ನಾಟಕ ಸರಕಾರ ಹೊಸ ವರ್ಷದ ಮುನ್ನಾದಿನ ಆದೇಶ ಹೊರಡಿಸಿದೆ.
ಈವರೆಗೆ ಜಿಲ್ಲೆಯ ಎಸ್ಪಿಯಾಗಿದ್ದ ಐಪಿಎಸ್ ನಿಶಾ ಜೇಮ್ಸ್ ಅವರನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಎಸ್ಪಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಮಚ್ಚಿಂದ್ರ ಅವರು ಕಲುಬುರಗಿ ಜಿಲ್ಲೆಯ ಚಿಂಚೋಳೀ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದರು