ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಜ.01: ಸರಕಾರದ ಹೊಸ ಆದೇಶದಂತೆ ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ಎನ್. ವಿಷ್ಣುವರ್ಧನ್ ಅಧಿಕಾರ ಸ್ವೀಕರಿಸಲಿದ್ದಾರೆ. ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ನೀಶಾ ಜೇಮ್ಸ್ ಅವರನ್ನು ವರ್ಗಾವಣೆಗೊಳಿಸಿ ಆ ಸ್ಥಳಕ್ಕೆ ಕಲಬುರ್ಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಹಾಕೆ ಅಕ್ಷಯ್ ಮಚ್ಚಿಂದ್ರ ಅವರನ್ನು (ಡಿ.31) ನೇಮಕ ಮಾಡಲಾಗಿತ್ತು. ಆದರೆ ಹಿಂದಿನ ಆದೇಶದಲ್ಲಿ ಮಾರ್ಪಾಡಾಗಿದ್ದು, ಅಕ್ಷಯ್ ಹಾಕೆ ಮಚ್ಚಿಂದ್ರ ಅವರನ್ನು ಉಡುಪಿ ಜಿಲ್ಲೆಯ ಕಾರ್ಕಳದ ನಕ್ಸಲ್ ನಿಗ್ರಹ ಪಡೆಗೆ ವರ್ಗಾವಣೆ ಮಾಡಲಾಗಿದೆ.
ನೂತನ ಎಸ್ಪಿ ವಿಷ್ಣುವರ್ಧನ್ ಅವರು 2015 ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದು, ಬೆಂಗಳೂರು ನಗರದ ಡಿಸಿಪಿ ಆಗಿದ್ದರು. ಇದೀಗ ಅವರನ್ನು ಉಡುಪಿಗೆ ವರ್ಗಾವಣೆ ಮಾಡಲಾಗಿದೆ. ಅವರು ಈ ಹಿಂದೆ ಉಡುಪಿಯಲ್ಲಿ ಹೆಚ್ಚುವರಿ ಎಸ್ಪಿಯಾಗಿಯೂ ಕಾರ್ಯನಿರ್ವಹಿಸಿದ್ದರು.