Kundapra.com ಕುಂದಾಪ್ರ ಡಾಟ್ ಕಾಂ

ಬಸ್ಸಿನಲ್ಲಿ ದಂಪತಿ, ಮಗು ವಿಷ ಸೇವಿಸಿದ ಪ್ರಕರಣ: ಪತಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಚಲಿಸುವ ಬಸ್‌ನಲ್ಲಿಯೇ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ದಂಪತಿ ಹಾಗೂ ಮಗುವಿನ ಪೈಕಿ ಪತಿ ರಾಜಕುಮಾರ್ (35) ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸುವ ದಾರಿ ಮಧ್ಯೆ ಗುರುವಾರ ರಾತ್ರಿ ಮೃತಪಟ್ಟಿದ್ದು, ಪತ್ನಿ ಸಂಗೀತಾ (28) ವೆನ್‌ಲಾಕ್ ಆಸ್ಪತ್ರೆ ತೀವ್ರ ನಿಗಾ ವಿಭಾಗದಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಮಗು ಉಡುಪಿ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಚೇತಿರಿಸಿಕೊಳ್ಳುತಿದೆ ಎನ್ನಲಾಗಿದೆ.

ಕೊಲ್ಲೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್‌ನಲ್ಲಿ ಅವರು ವಿಷ ಸೇವಿಸಿದ್ದರು. ಗಂಭೀರ ಸ್ಥಿತಿಯಲ್ಲಿ ಇದ್ದ ದಂಪತಿ ಪ್ರಾಣ ಉಳಿಸುವ ಯತ್ನ ನಡೆಸಿದ ಬಸ್‌ನ ಚಾಲಕ ಹಾಗೂ ನಿರ್ವಾಹಕ ಇಬ್ಬರು ಕಟ್‌ಬೇಲ್ತೂರಿನಿಂದ ಕುಂದಾಪುರದವರೆಗೆ ಎಲ್ಲಿಯೂ ಬಸ್ ನಿಲುಗಡೆ ಮಾಡದೇ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ತಂದಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮೊದಲು ಉಡುಪಿ ಅಜ್ಜರಕಾಡುವಿನ ಸರಕಾರಿ ಆಸ್ಪತ್ರೆಗೆ, ಬಳಿಕ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಿಷ ಸೇವನೆ ಮಾಡಿದ ದಂಪತಿ ತಮಿಳುನಾಡಿನ ಚಿನೈ ಮೂಲದವರಾಗಿದ್ದು ಕೂಲಿ ಕೆಲಸ ಮಾಡಲು ಉಡುಪಿ ಅಂಬಲಪಾಡಿಯಲ್ಲಿ ಕೆಲವು ದಿನಗಳಿಂದ ವಾಸಿಸುತ್ತಿದ್ದರು. ಬಸ್ ಚಾಲಕ ಹಾಗೂ ನಿರ್ವಾಹಕರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:
► ಕುಂದಾಪುರ: ಚಲಿಸುವ ಬಸ್‌ಲ್ಲಿ ವಿಷ ಸೇವಿಸಿದ ದಂಪತಿ – https://kundapraa.com/?p=34762 .

Exit mobile version