Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ವ್ಯ.ಸೇ.ಸ ಸಂಘದ ಅಧ್ಯಕ್ಷರಾಗಿ ಟಿ. ನಾರಾಯಣ ಹೆಗ್ಡೆ ಪುನರಾಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಟಿ. ನಾರಾಯಣ ಹೆಗ್ಡೆ ಅವಿರೋಧವಾಗಿ ಮೂರನೇ ಭಾರಿಗೆ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ನಿರ್ದೇಶಕರುಗಳಾಗಿ ವೆಂಕ್ಟ ಪೂಜಾರಿ, ಕೃಷ್ಣ ದೇವಾಡಿಗ, ಗಿರೀಶ್ ಮೇಸ್ತ, ಚಿಕ್ಕು ಪೂಜಾರಿ, ವಸಂತಕುಮಾರ್ ಶೆಟ್ಟಿ, ನಾಗರಾಜ ಶೆಟ್ಟಿ, ಡಿ. ಸದಾಶಿವ ಶೇರುಗಾರ್, ಕೆ. ಬಾಬು ಶೆಟ್ಟಿ, ಟಿ. ಕೃಷ್ಣ ನಾಯ್ಕ್, ಶಂಕರ ನಾಯ್ಕ್, ಜ್ಯೋತಿ ಶೇರುಗಾರ್, ರಜನಿ ಶ್ಯಾನುಭಾಗ್ ಈ ಮೊದಲು ಅವಿರೋಧವಾಗಿ ಆಯ್ಕೆಯಾಗಿದ್ದು, ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಅವಿರೋಧವಾಗಿ ನಡೆಸಿದರು.

ಬಳಿಕ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಮಾತನಾಡಿ ಸಂಸ್ಥೆಯಲ್ಲಿ ಹನ್ನೊಂದು ಸಾವಿರಕ್ಕೂ ಅಧಿಕ ಸದಸ್ಯರಿದ್ದು, ಉತ್ತಮ ಸೇವೆ ನೀಡುತ್ತಾ ಬರಲಾಗಿದೆ. ಇನ್ನು ಮುಂದೆಯೂ ಹಲವಾರು ಜವಾಬ್ದಾರಿಗಳಿದ್ದು, ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನೆರವೇರಿಸುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭ ಚುನಾವಣಾಧಿಕಾರಿ ವೇಣುಗೋಪಾಲ, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ವಿಠಲ ಗೌಡ, ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಾಂತಾನಂದ ಶೆಟ್ಟಿ ಸ್ವಾಗತಿಸಿ, ಶಾಲಾ ವ್ಯವಸ್ಥಾಪಕ ಚಂದ್ರ ಮೊಗೇರ ವಂದಿಸಿದರು.

Exit mobile version