ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಂಸ್ಥೆಯಲ್ಲಿ ಸಮಾಜಕ್ಕಾಗಿ ಏನಾದರೂ ಮಾಡಬೇಕೆಂಬ ಹಂಬಲವಿದ್ದಾಗ ಮಾತ್ರ ಅಲ್ಲಿ ಅತ್ಯುತ್ತಮ ಯೋಜನೆಗಳು ಹುಟ್ಟಿಕೊಳ್ಳುತ್ತವೆ. ಉತ್ತಮ ಸಂಘ-ಸಂಸ್ಥೆಗಳು ವ್ಯಕ್ತಿತ್ವ ರೂಪಿಸುವ ಕೆಲಸವನ್ನು ಮಾಡುತ್ತವೆ ಎಂದು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು.
ಅವರು ಸುರಭಿ ರಿ. ಬೈಂದೂರು ಹಾಗೂ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಆಶ್ರಯದಲ್ಲಿ ಫೆ.೮ರಿಂದ ಜರುಗಲಿರುವ ಶಿಶಿರ ನಾಟಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ ಕಳೆದ ೧೯ ವರ್ಷಗಳಿಂದ ಸುರಭಿ ಸಂಸ್ಥೆಯು ಬೈಂದೂರಿಗೆ ವಿಭಿನ್ನ ಕಾರ್ಯಕ್ರಮಗಳನ್ನು ನೀಡಿ ಜನಮಾನಸದಲ್ಲಿ ಗುರುತಿಸಿಕೊಂಡಿರುವುದಲ್ಲದೇ ಬೈಂದೂರಿನ ಹೆಸರನ್ನು ಎಲ್ಲೆಡೆಯೂ ಪಸರಿಸುವಲ್ಲಿ ತನ್ನದೇ ಆದ ಕೊಡುಗೆ ನೀಡಿದೆ ಎಂದರು.
ಸುರಭಿ ರಿ. ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೌರವ ಸಲಹೆಗಾರ ಜಿ. ತಿಮ್ಮಪ್ಪಯ್ಯ ಮಯ್ಯಾಡಿ, ಜೊತೆ ಕಾರ್ಯದರ್ಶಿ ಅಬ್ದುಲ್ ರವೂಫ್, ನಿರ್ದೇಶಕ ಸುಧಾಕರ ಪಿ. ಬೈಂದೂರು, ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ ಉಪಸ್ಥಿತರಿದ್ದರು.