ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದ ಅಷ್ಟಠಬಂಧ ಬ್ರಹ್ಮಕಲಶೋತ್ಸವ ಸಂದರ್ಭ ಜರುಗಲಿರುವ ಶ್ರೀನಿವಾಸ ಕಲ್ಯಾಣೋತ್ಸವದ ಚಪ್ಪರ ಮುಹೂರ್ತ ಶುಕ್ರವಾರ ಜರುಗಿತು.
ಈ ಸಂದರ್ಭ ಮಾತನಾಡಿದ ದೇವಸ್ಥಾನದ ಗೌರವಾಧ್ಯಕ್ಷ ಎಸ್. ರಾಜು ಪೂಜಾರಿ ಮಾತನಾಡಿ ಊರಿನ ಧಾರ್ಮಿಕ ಕಾರ್ಯಕ್ರಮಗಳು ಸರ್ವರ ಸಹಕಾರವಿದ್ದಾಗಲಷ್ಟೇ ಯಶಸ್ಸು ಕಾಣಲು ಸಾಧ್ಯವಿದೆ. ಊರಿನ ಶ್ರೇಯಸ್ಸಿಗಾಗಿ ನಡೆಯುವ ಧಾರ್ಮಿಕ ಕೆಲಸಗಳಲ್ಲಿ ಎಲ್ಲವೂ ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು.
ದೇವಳದ ಅರ್ಚಕ ಬಿ. ಕೃಷ್ಣಮೂರ್ತಿ ನಾವಡ ಅವರ ನೇತೃತ್ವದಲ್ಲಿ ಪೂಜಾ ವಿಧಿಗಳು ನೆರವೇರಿದವು. ಈ ಸಂದರ್ಭ ದೇವಸ್ಥಾನದ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, ಕಾರ್ಯದರ್ಶಿ ಎಸ್. ಶಿವರಾಮ ಪೂಜಾರಿ, ಆಡಳಿತ ಮಂಡಳಿ ಸದಸ್ಯರುಗಳಾದ ಶಂಕರ ಮೊಗವೀರ, ಮಂಜುನಾಥ ಆಚಾರ್ಯ, ಅಣ್ಣಪ್ಪ ಪೂಜಾರಿ, ನಾಗರಾಜ ಗಾಣಿಗ ಬಂಕೇಶ್ವರ, ದೊಟ್ಟಯ್ಯ ಪೂಜಾರಿ, ಗ್ರಾಮಸ್ಥರಾದ ಶ್ರೀನಿವಾಸ ಉಬ್ಜೇರಿ, ಬಿ. ಚಂದ್ರಶೇಖರ ನಾವಡ, ಗಿರೀಶ್ ಬೈಂದೂರು, ಗಣೇಶ್ ಪೂಜಾರಿ, ಶಶಿಕಲಾ, ಸಾವಿತ್ರಿ ಅಳ್ವೆಗದ್ದೆ, ರಘುರಾಮ ಪೂಜಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಫೆ. 16ರಿಂದ 19ರ ತನದ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಫೆ.18ರಂದು ಶ್ರೀ ದೇವಿಯ ಅಷ್ಠಬಂಧ ಪುನಃ ಪ್ರತಿಷ್ಠೆ ಹಾಗೂ ಅಂದು ಸಂಜೆ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಜರುಗಲಿದೆ.