Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಟ: ಕೊಲೆ ಪ್ರಕರಣದ ಆರೋಪಿಗೆ ನ್ಯಾಯಾಂಗ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಇಲ್ಲಿಗೆ ಸಮೀಪದ ಕೋಟ ಪೊಲೀಸ್‌ ಠಾಣಾ ವ್ಯಾಪ್ತಿಯ ಮಣೂರು ಎಂಬಲ್ಲಿ 2019, ಜನವರಿ 26 ರಂದು ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿ ಜಿಲ್ಲಾ ಪಂಚಾಯಿತಿ ಸದಸ್ಯ ರಾಘವೇಂದ್ರ ಕಾಂಚನ್‌ ಶುಕ್ರವಾರ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಹಾಜರಾದರು.

ಈ ಪ್ರಕರಣದಲ್ಲಿ ಅವರಿಗೆ ಹೈಕೋರ್ಟ್‌ನಲ್ಲಿ ಜಾಮೀನು ಸಿಕ್ಕಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಎತ್ತಿಹಿಡಿದ ಸುಪ್ರೀಂ ಕೋರ್ಟ್‌ ಜಾಮೀನು ವಜಾಗೊಳಿಸಿತ್ತು.

ಟಾಯ್ಲೆಟ್‌ ಪಿಟ್‌ ವಿಚಾರಕ್ಕೆ ಸಂಬಂಧಿಸಿ ವಿಚಾರಕ್ಕೆ ನಡೆದ ಪ್ರಕರಣದಲ್ಲಿ ಭರತ್‌ ಹಾಗೂ ಯತೀಶ್‌ ಎಂಬ ಯುವಕರಿಬ್ಬರ ಕೊಲೆ ನಡೆದಿತ್ತು. ಜಾಮೀನು ರದ್ದತಿ ಆಗಿದ್ದರಿಂದ ಆರೋಪಿ ಬಂಧಿಸುವಂತೆ ನ್ಯಾಯಾಲಯವು ಆದೇಶ ನೀಡಿತ್ತು. ಆರೋಪಿಗಾಗಿ ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಶುಕ್ರವಾರ ಇಲ್ಲಿನ ನ್ಯಾಯಾಲಯಕ್ಕೆ ಶರಣಾದ ರಾಘವೇಂದ್ರ ಕಾಂಚನ್‌ಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಉಡುಪಿ ಉಪವಿಭಾಗದ ಡಿವೈಎಸ್‌ಪಿ ಟಿ.ಜೈಶಂಕರ್‌, ಬ್ರಹ್ಮಾವರ ಸರ್ಕಲ್‌ ಇನ್‌ಸ್ಪೆಕ್ಟರ್‌ ಅನಂತಪದ್ಮನಾಭ, ಕೋಟ ಎಸ್‌.ಐ ನಿತ್ಯಾನಂದ ಇದ್ದರು.

 

Exit mobile version