Kundapra.com ಕುಂದಾಪ್ರ ಡಾಟ್ ಕಾಂ

ಬಿಜೆಪಿಗೆ ಒಲಿಯಿತು ಬಿಜೂರು ಗ್ರಾ.ಪಂ ಅಧ್ಯಕ್ಷ ಗಾದಿ

ಬೈಂದೂರು: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಸಮಬಲ ಸಾಧಿಸಿ ಭಾರಿ ನಿರೀಕ್ಷೆ ಹುಟ್ಟಿಸಿದ್ದ ಬಿಜೂರು ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷ ಗಾದಿ ಕೊನೆಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಪಾಲಿಗೆ ಒಲಿದಿದೆ.

ಗ್ರಾಮ ಪಂಚಾಯತ್ ಅಧ್ಯಕ್ಷ ಗಾದಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 9 ಹಾಗೂ ಬಿಜೆಪಿ ಬೆಂಬಲಿತ 9 ಸದಸ್ಯರು ಮತ ಚಲಾಯಿಸಿದ್ದರು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯೋರ್ವರು ಚಲಾಯಿಸಿದ ಮತ ಅಸಿಂಧುವಾದ್ದರಿಂದ ಕೊನೆಗೆ ಬಿಜೆಪಿಯ ಲೋಕಾಕ್ಷಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿತ್ತು. ಆದರೆ ಇಲ್ಲಿ ಪ್ರತಿಸ್ಪರ್ಧಿ ಇಲ್ಲದಿದ್ದುರಿಂದ ಕಾಂಗ್ರೆಸ್ ಬೆಂಬಲಿತ ಚಂದು ಅವರು ನೇರವಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಭದ್ರಕೋಟೆ ಒಡೆಯಿತು
ಬಿಜೂರು ಗ್ರಾಮ ಪಂಚಾಯತ್ ಕಾಂಗ್ರೆಸ್ ಪಕ್ಷದ ಭದ್ರಕೋಟೆ ಎಂದೇ ಕರೆಯಲ್ಪಡುತ್ತಿತ್ತು. ಸುಮಾರು 25ಕ್ಕೂ ಹೆಚ್ಚು ವರ್ಷಗಳಿಂದ ಪಂಚಾಯತಿಯಲ್ಲಿ ಕಾಂಗ್ರೆಸ್ ಆಡಳಿತವಿತ್ತು. ಎಪಿಸಿಸಿ ಸದಸ್ಯ ಹಾಗೂ ಎಸ್.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕ ರಘರಾಮ ಶೆಟ್ಟಿ ಹಾಗೂ ಬೈಂದೂರು ಕ್ಷೇತ್ರದ ಶಾಸಕ ಗೋಪಾಲ ಪೂಜಾರಿಯವರು ಮತ್ತೆ ಕಾಂಗ್ರೆಸ್ ಆಡಳಿವನ್ನು ತರಲು ಸಾಕಷ್ಟು ಯತ್ನಿಸಿದ್ದರು. ಆದರೆ ಬಿಜೆಪಿ ಸದಸ್ಯರುಗಳ ನಿರಂತರವಾದ ಹೋರಾಟ ಹಾಗೂ ಶ್ರಮದ ಫಲವಾಗಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಒಗ್ಗಟ್ಟು ಪ್ರದರ್ಶಿಸಿದ್ದರಿಂದ ಬಿಜೆಪಿ ಪಕ್ಷ ತನ್ನ ಅಸ್ತಿತ್ವನ್ನು ತೋರಿಸಿಕೊಂಡತಾಗಿದೆ..

ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸುಕುಮಾರ ಶೆಟ್ಟಿ ವಿಜೇತ ಅಭ್ಯರ್ಥಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಚುನಾವಣಾಧಿಕಾರಿಯಾಗಿ ಪರಶುರಾಮ ಕಾರ್ಯನಿರ್ವಹಿಸಿದ್ದರು.

Exit mobile version