Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು: ನೂತನ ಪಿಎಸೈ ಆಗಿ ಸಂಗೀತಾ ಅಧಿಕಾರ ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಪೊಲೀಸ್ ಠಾಣೆಯ ನೂತನ ಪೊಲೀಸ್ ಉಪ ನಿರೀಕ್ಷಕರಾಗಿ ಸಂಗೀತಾ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಗುಲ್ಬರ್ಗದವರಾದ ಸಂಗೀತಾ ಅವರು ಬಿಎ ಶಿಕ್ಷಣ ಮುಗಿಸಿ ಪೊಲೀಸ್ ವೃತ್ತಿಗೆ ಸೇರ್ಪಡೆಯಾಗಿದ್ದರು. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಹಾಗೂ ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ತಲಾ ನಾಲ್ಕು ತಿಂಗಳು ಪ್ರೋಬೇಷನರಿ ಅವಧಿ ಪೂರ್ಣಗೊಳಿಸಿ ಇದೀಗ ಬೈಂದೂರಿನ ನೂತನ ಠಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ಇಲ್ಲಿನ ಠಾಣಾಧಿಕಾರಿಯಾಗಿದ್ದ ತಿಮ್ಮೇಶ್ ಬಿ.ಎನ್. ಅವರು ಮಲ್ಪೆ ಠಾಣೆಗೆ ವರ್ಗಾವಣೆಗೊಂಡ ಬಳಿಕ, ಇಲ್ಲಿ ಠಾಣಾಧಿಕಾರಿ ಹುದ್ದೆ ಖಾಲಿಯಿದ್ದು, ಎಎಸ್‌ಎ ಮಹಾಬಲ ಅವರು ತಾತ್ಕಾಲಿಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

Exit mobile version