ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಪಠ್ಯದ ಓದಿನ ಜೊತೆಯಾದ ಪಠ್ಯೇತರ ಚಟುವಟಿಕೆಗಳ ಭಾಗವಹಿಸುವಿಕೆ ವಿದ್ಯಾರ್ಥಿ ಸಮೂಹಕ್ಕೆ ವಿದ್ಯುನ್ಮಾನ ಜಗತ್ತಿನ ಬೇಡಿಕೆಗಳನ್ನು ಪೂರೈಸಿಕೊಳ್ಳುವ ಜಾಣ್ಮೆಯನ್ನು ತಿಳಿಯಪಡಿಸುವುದು. ಈ ತೆರನಾಗಿ ಬೋಧನಾ ಪ್ರಕ್ರಿಯೆಯ ಜೊತೆಯಾಗಿ ವಿದ್ಯಾರ್ಥಿಗಳನ್ನು ಸಾಹಿತ್ಯಿಕ – ಸಾಂಸ್ಕೃತಿಕ – ಕ್ರೀಡಾ ನೆಲೆಗಳಲ್ಲಿ ಅಣಿಗೊಳಿಸುವ ಕಾರ್ಯದಲ್ಲಿ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ನಿರತವಾಗಿದೆ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಹೇಳಿದರು.
ಇವರು ಇಲ್ಲಿನ ದಶಮ ಸಂಭ್ರಮಾಚರಣೆಯಲ್ಲಿರುವ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಉಪಾಧ್ಯಕ್ಷ ಪ್ರೊ. ಎ. ಪಿ. ಮಿತ್ತಂತಾಯ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಸೂಕ್ತ ವೇದಿಕೆಗಳನ್ನು ಕಲ್ಪಿಸುವಲ್ಲಿ ಯಶಸ್ವಿಯಾದ ಈ ಕಾಲೇಜು ಮಾದರಿ ವಿದ್ಯಾಸಂಸ್ಥೆಯಾಗಿದೆ ಎಂದರು.
ಇಲ್ಲಿನ ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ ಪ್ರಾಸ್ತಾವಿಸಿದರು. ಇಂಗ್ಲೀಷ್ ಉಪನ್ಯಾಸಕಿ ಅಮೃತಾ ಉಪಸ್ಥಿತರಿದ್ದರು.
ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ವಾಣಿಜ್ಯ ಉಪನ್ಯಾಸಕ ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿದರು. ಕನ್ನಡ ಉಪನ್ಯಾಸಕಿ ಪ್ರವೀಣಾ ಮಹಾಬಲ ಪೂಜಾರಿ ನಿರೂಪಿಸಿದರು.