Site icon Kundapra.com ಕುಂದಾಪ್ರ ಡಾಟ್ ಕಾಂ

ಫೆ.27-29: ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ಉಚಿತ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೈಂದೂರು ವಿಧಾನಸಭಾ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಫೆಬ್ರವರಿ ೨೭ರಿಂದ ೨೯ರ ತನಕ ಉಚಿತವಾಗಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೋರಲಾಗಿದೆ.

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಬಾಪೂಜಿ ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ ಕಾರ್ಡ್ ವಿತರಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಕೂಡಲೇ ನೊಂದಾಯಿಸಿಕೊಂಡು ಕಾರ್ಡ್ ಪಡೆದುಕೊಳ್ಳಬಹುದಾಗಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಅವರ ಮುತುವರ್ಜಿಯ ಮೇರೆಗೆ ಶಿವಮೊಗ್ಗ ಪ್ರೇರಣಾ ಎಜುಕೇಶನಲ್ & ಸೋಶಿಯಲ್ ಟ್ರಸ್ಟ್ ಮೂಲಕ ಮೂರು ದಿನಗಳ ಕಾಲ ಎಲ್ಲಾ ಪಂಚಾಯತಿಗಳಲ್ಲಿ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

 

Exit mobile version