ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಭಾರತೀಯ ಸೇನೆಯಲ್ಲಿ ಸೇರ್ಪಡೆಯಾಗುವ ಜಿಲ್ಲೆಯ ಅಭ್ಯರ್ಥಿಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು, ಜಿಲ್ಲೆಯಿಂದ ಸೇನೆಗೆ ಸೇರಲು ಆಸಕ್ತರಿರುವ ಅಭ್ಯರ್ಥಿಗಳಿಗೆ ಅಗತ್ಯ ಮಾಹಿತಿ ಮತ್ತು ತರಬೇತಿಯನ್ನು ಜಿಲ್ಲಾಡಳಿತದ ವತಿಯಿಂದ ಉಚಿತವಾಗಿ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.
ಉಡುಪಿ ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಏಪ್ರಿಲ್ 4 ರಿಂದ 14 ರ ವರೆಗೆ ನಡೆಯಲಿರುವ ಸೇನಾ ನೇಮಕಾತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿರುವ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ, ಮಾರ್ಚ್ 15 ರಿಂದ 31 ರವರೆಗೆ ಉಚಿತ ತರಬೇತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಮಾರ್ಚ್ 12 ರ ಒಳಗೆ ಬೆಳಗ್ಗೆ 9.00 ರಿಂದ ಸಂಜೆ 5 ರ ವರೆಗೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಮೊ.ಸಂಖ್ಯೆ. 9480886467 ಅವರನ್ನು ಫೋನ್ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.