Kundapra.com ಕುಂದಾಪ್ರ ಡಾಟ್ ಕಾಂ

ನಾಕಟ್ಟೆ ಗರಡಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕೋಟಿ ಚೆನ್ನಯರು ಕರಾವಳಿಯ ವೀರ ಪುರುಷರಾಗಿದ್ದು ಅವರು ನೆಲೆಸಿ, ನಡೆದಾಡಿದ ಸಾನಿಧ್ಯವೆಲ್ಲವೂ ಇಂದು ಶಕ್ತಿಸ್ಥಳವಾಗಿ ಮಾರ್ಪಟ್ಟಿದೆ. ಅವರ ಕೊನೆಯ ಗರಡಿಯಾಗಿರುವ ನಾಕಟ್ಟೆ ಗರಡಿಯೂ ಕೂಡ ಜೀರ್ಣೋದ್ಧಾರಗೊಳ್ಳುತ್ತಿದ್ದಂತೆ ಇಡಿ ಊರಿಗೆ ಚೈತನ್ಯ ತಂದುಕೊಡಲಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರಿ ರತ್ನ ಡಾ. ಎಂ. ಎನ್. ರಾಜೇಂದ್ರಕುಮಾರ್ ಅವರು ಹೇಳಿದರು.

ಅವರು ಬೈಂದೂರು ತಾಲೂಕು ಯಡ್ತರೆ ನಾಕಟ್ಟೆಯಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಭೇಟಿ ನೀಡಿ ಬಳಿಕ ಮಾತನಾಡಿ ಬಹಳ ವರ್ಷಗಳ ಬಳಿಕ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿರುವುದು ಖುಷಿಯ ಸಂಗತಿಯಾಗಿದ್ದು, ಸಾರ್ವಜನಿಕರ ಸಹಕಾರದಿಂದ ದೇವತಾ ಕಾರ್ಯಗಳೆಲ್ಲವೂ ಯಶಸ್ವಿಯಾಗಿ ನಡೆಯಲಿದೆ ಎಂದರು.

ಈ ಸಂದರ್ಭ ಬಜ್ಪೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮೋನಪ್ಪ ಶೆಟ್ಟಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ರತ್ನಾಕರ ಶೆಟ್ಟಿ, ರಾಘವ ಶೆಟ್ಟಿ ಕಾರ್ಕಳ, ವೃಷಭದೇವ ಅಧಿಕಾರಿ ಕಾರ್ಕಳ, ಸ್ಥಳೀಯರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ಮದನಕುಮಾರ್ ಉಪ್ಪುಂದ, ನಾಗರಾಜ ಗಾಣಿಗ ಬಂಕೇಶ್ವರ, ತಿಮ್ಮಪ್ಪ ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಅರ್ಚಕ ಕುಟುಂಬದ ಮಂಜುನಾಥ ಮೇಲ್ಹಿತ್ಲು, ಕಾರ್ಯದರ್ಶಿ ಶಿವರಾಮ ಪೂಜಾರಿ, ಮುತ್ತಯ್ಯ ಪೂಜಾರಿ, ಅಣ್ಣಪ್ಪ ಪೂಜಾರಿ ಯಡ್ತರೆ, ಮಂಜುನಾಥ ಪೂಜಾರಿ ತಗ್ಗರ್ಸೆ, ಶೇಖರ ಪೂಜಾರಿ ಉಪ್ಪುಂದ, ಎಸ್‌ಸಿಡಿಸಿಸಿ ಬ್ಯಾಂಕ್ ಬೈಂದೂರು ಶಾಖಾ ಪ್ರಬಂಧಕ ವೆಂಕಟೇಶ್ ಮೊದಲಾದವರು ಇದ್ದರು.

 

Exit mobile version