Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದ ರಸ್ತೆಯ ಕಾಂಕ್ರೀಟಿಕರಣಕ್ಕೆ ಗುದ್ದಲಿ ಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ: ಅತ್ಯಂತ ಹಿಂದುಳಿದ ಮೀನುಗಾರಿಕಾ ಬಂದರು ಪ್ರದೇಶವಾಗಿರುವ ಗಂಗೊಳ್ಳಿಯ ಅಭಿವೃದ್ಧಿಗೆ ಸರಕಾರ ಬದ್ಧವಾಗಿದ್ದು, ವಿವಿಧ ರಸ್ತೆಗಳ ಅಭಿವೃದ್ಧಿ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳಿಗೆ ಸರಕಾರದ ಅನುದಾನ ಒದಗಿಸುವ ಪ್ರಯತ್ನ ನಡೆಸಲಾಗುತ್ತಿದೆ. ಗಂಗೊಳ್ಳಿ ಮುಖ್ಯರಸ್ತೆ ಕಾಂಕ್ರೀಟಿಕರಣಕ್ಕೆ 1.47 ಕೋಟಿ ರೂ. ಮಂಜೂರಾಗಿದ್ದು, ಅತೀ ಶೀಘ್ರ ಕಾಮಗಾರಿ ಪ್ರಾರಂಭವಾಗಲಿದೆ. ಈ ಭಾಗದಲ್ಲಿ ರಿಂಗ್ ರೋಡ್ ನಿರ್ಮಾಣಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಇದರ ಬಗ್ಗೆ ಗಂಭೀರ ಪ್ರಯತ್ನ ನಡೆಸಲಾಗುವುದು. ಮಳೆಗಾಲದ ನೀರು ಹರಿದು ಹೋಗುವ ಗೋಧಿ ತೋಡು ಅಭಿವೃದ್ಧಿಗೆ ಸರಕಾರದಿಂದ ಅನುದಾನ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು.

ಗಂಗೊಳ್ಳಿ ಗ್ರಾಮದ ಶ್ರೀ ವೀರೇಶ್ವರ ದೇವಸ್ಥಾನದ ಬಳಿಯಿಂದ ಗುಡ್ಡೆಕೇರಿ ಸಂಪರ್ಕ ರಸ್ತೆಯ ಸುಮಾರು 35 ಲಕ್ಷ ರೂ. ವೆಚ್ಚದ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಗೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗ್ರಾಪಂ ಸದಸ್ಯರಾದ ಬಿ.ರಾಘವೇಂದ್ರ ಪೈ, ನಾಗರಾಜ ಖಾರ್ವಿ ಗುಡ್ಡೆಕೇರಿ, ಸಾವಿತ್ರಿ ಖಾರ್ವಿ, ಬಿ.ಗಣೇಶ ಶೆಣೈ, ನಾಗರಾಜ ಖಾರ್ವಿ ಪಿ.ಬಿ., ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ, ಗುಜ್ಜಾಡಿ ಗ್ರಾಪಂ ಸದಸ್ಯ ಹರೀಶ ಮೇಸ್ತ, ರಾಮಚಂದ್ರ ಮಂಜ, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version