ಕುಂದಾಪ್ರ ಡಾಟ್ ಕಾಂ ಸುದ್ದಿ
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ, ಹೊರ ರಾಜ್ಯ ಹಾಗೂ ದೇಶ-ವಿದೇಶಗಳಿಂದ ಭಕ್ತಾದಿಗಳು ಆಗಮಿಸಿ ಶ್ರೀ ದೇವಿಯ ದರ್ಶನವನ್ನು ಪಡೆಯುತ್ತಿದ್ದು, ಪ್ರಸ್ತುತ ಕೊರೋನಾ ವೈರಸ್ ಸೋಂಕು ದೇಶ ವಿದೇಶದಲ್ಲಿ ಹರಡುತ್ತಿರುವುದಲ್ಲದೇ ಇದೀಗ ರಾಜ್ಯ ಹಾಗೂ ಜಿಲ್ಲೆಯಲ್ಲಿಯೂ ಸಹ ಹರಡುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಕ್ಷೇತ್ರಕ್ಕೆ ಭೇಟಿ ನೀಡಲು ಇಚ್ಚಿಸಿರುವ ಭಕ್ತರು ತಮ್ಮ ಪ್ರವಾಸವನ್ನು ಒಂದು ವಾರದ ಕಾಲ ಮುಂದೂಡಿ ಸಹಕರಿಸುವಂತೆ ಕೊಲ್ಲೂರು ದೇವಳದ ಪ್ರಕಟಣೆಯಲ್ಲಿ ಕೋರಲಾಗಿದೆ.
ಕೊರೋನಾ ಭೀತಿ: ಕೊಲ್ಲೂರು ಭೇಟಿ ಮುಂದೂಡಲು ದೇವಳದಿಂದ ಮನವಿ

