Kundapra.com ಕುಂದಾಪ್ರ ಡಾಟ್ ಕಾಂ

ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ- ವಯೋಮಿತಿ ಹೆಚ್ಚಳ

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2019 ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಲೇಖಕರ ವಯೋಮಿತಿಯನ್ನು 18 ರಿಂದ 40 ವರ್ಷಕ್ಕೆ ಹೆಚ್ಚಿಸಲಾಗಿದೆ.

ಅರ್ಜಿಗಳನ್ನು ಏಪ್ರಿಲ್ 15 ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು, ಇವರಿಗೆ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು, ದೂರವಾಣಿ ಸಂಖ್ಯೆ: 080-22484516 / 22017704 ನ್ನು ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version