Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆ: ಇಬ್ಬರು ವ್ಯಕ್ತಿಗಳಲ್ಲಿ ಕೊರೋನಾ ಪಾಸಿಟಿವ್ ದೃಢ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಾಚ್.29ರಂದು ಇಬ್ಬರು ವ್ಯಕ್ತಿಗಳಲ್ಲಿ ಕೊರೋನಾ ಸೊಂಕು ಇರುವುದು ದೃಢಪಟ್ಟಿದೆ.

ಮಾಚ್. 17ರಂದು ದುಬೈನಿಂದ ಆಗಮಿಸಿದ್ದ ಉಡುಪಿ ವ್ಯಕ್ತಿಯಲ್ಲಿ (35 ವರ್ಷ ಪ್ರಾಯ) ಕೊರೋನಾ ಲಕ್ಷಣ ಕಾಣಿಸಿಕೊಂಡಿದ್ದರಿಂದ ಮಾಚ್ 27ರಂದು ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಗಂಟಲು ದ್ರಾವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದು, ಇಂದು ವರದಿಯಲ್ಲಿ ಪಾಸಿಟಿವ್ ಬಂದಿದೆ. /ಕುಂದಾಪ್ರ ಡಾಟ್ ಕಾಂ/

ಕೆಲಸದ ನಿಮಿತ್ತ ತ್ರಿವೆಂಡಮ್‌ಗೆ ತೆರಳಿದ್ದ ಉಡುಪಿಯ ವ್ಯಕ್ತಿಯನ್ನು (29 ವರ್ಷ) ಮಾರ್ಚ್ 26ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಗಂಟಲು ದ್ರಾವಣ ಪರೀಕ್ಷೆಗೆ ಕಳುಹಿಸಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ.

ಈ ಇಬ್ಬರು ರೋಗಿಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾರುವ ಬಗ್ಗೆ ಜಿಲ್ಲಾ ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು ಮೂರು ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾದಂತಾಗಿದೆ./ಕುಂದಾಪ್ರ ಡಾಟ್ ಕಾಂ ಸುದ್ದಿ./

 

Exit mobile version