Site icon Kundapra.com ಕುಂದಾಪ್ರ ಡಾಟ್ ಕಾಂ

ಪಡುಕೋಣೆ ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ: 6 ಮಂದಿಯ ವಿರುದ್ಧ ಪ್ರಕರಣ ದಾಖಲು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಲಾಕ್‌ಡೌನ್ ಆದೇಶ ಉಲ್ಲಂಘಿಸಿ, ಪಡುಕೋಣೆಯ ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಗ್ಗೆ ಪ್ರಕರಣ ದಾಖಲಾಗಿದೆ.

ಬೈಂದೂರು ತಾಲೂಕಿನ ನಾಡ ಗ್ರಾಮದ ಪಡುಕೋಣೆ ಸಂತ ಅಂತೋನಿ ಚರ್ಚ್‌ನಲ್ಲಿ ಜನರು ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿರುವ ಬಗ್ಗೆ ಸಾರ್ವಜನಿಕ ದೂರವಾಣಿ ಕರೆಯ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಾರ್ಥನೆ ಸಲ್ಲಿಸುತ್ತಿದ್ದ ಚರ್ಚ್‌ನ ಫಾದರ್ ಫ್ರೆಡ್ ಮಸ್ಕರಿಯನ್ ಹಾಗೂ ಇತರ ಆರು ಮಂದಿಯ ಮೇಲೆ ಪ್ರಕರಣ ದಾಖಲಾಗಿದೆ.

ಜಿಲ್ಲೆಯಲ್ಲಿ ಕೊರೋನಾ ವೈರಸ್ ತಡೆಗಟ್ಟುವಿಕೆ ನಿಟ್ಟಿನಲ್ಲಿ ಜಾತ್ರೆ, ಸಭೆ ಸಮಾರಂಭಗಳು ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿಷೇಧಿಸಿ ಹೊರಡಿಸಿರುವ ಆದೇಶವನ್ನು ಉಲ್ಲಂಘಿಸಿ, ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದರಿಂದ ಬೈಂದೂರು ತಹಶಿಲ್ದಾರ್ ಬಸಪ್ಪ ಪಿ. ಪೂಜಾರಿ ಅವರು ನೀಡಿದ ದೂರಿನ್ವಯ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/

 

Exit mobile version