Kundapra.com ಕುಂದಾಪ್ರ ಡಾಟ್ ಕಾಂ

ಸರಕಾರಿ ಗೌರವಗಳೊಂದಿಗೆ ಮಾಜಿ ಶಾಸಕಿ ವಿನ್ನಿಫ್ರೆಡ್ ಫೆರ್ನಾಂಡಿಸ್ ಅಂತ್ಯಕ್ರಿಯೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಎ.28ರಂದು ನಿಧನರಾದ ಕುಂದಾಪುರದ ಮಾಜಿ ಶಾಸಕಿ ವಿನ್ನಿಫ್ರೆಡ್ ಫರ್ನಾಂಡಿಸ್ ಅವರ ಅಂತ್ಯಕ್ರಿಯೆ ಗುರುವಾರ ಬೆಳಗ್ಗೆ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿತು.

ಕೋವಿಡ್ 19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಅವರ ಕುಟುಂಬಿಕರು ಮಾತ್ರ ಪಾಲ್ಗೊಂಡಿದ್ದರು. ಎಎಸ್ಪಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ಸರಕಾರಿ ಗೌರವ ಸಲ್ಲಿಸಲಾಯಿತು.ಮೃತರ ಗೌರವಾರ್ಥ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಲಾಯಿತು. ಊರಿನ ನಾಗರಿಕರು, ಅಭಿಮಾನಿಗಳು ಅವರ ಪಾರ್ಥಿವ ಶರೀರ ಬರುವ ಹಾದಿಯಲ್ಲಿ ಮನೆಯಂಗಳದಲ್ಲಿಯೇ ನಿಂತು ಗೌರವ ಸೂಚಿಸಿದರು.

ಅಂತ್ಯಕ್ರಿಯೆ ಮೊದಲು ಮಾಜಿ ಸಚಿವ ಯು.ಟಿ.ಖಾದರ್, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಅಂತಿಮ ದರ್ಶನ ಪಡೆದರು.

ಇದನ್ನೂ ಓದಿ:
► ಕುಂದಾಪುರದ ಮಾಜಿ ಶಾಸಕಿ ವಿನ್ನಿಫ್ರೆಡ್ ಫರ್ನಾಂಡಿಸ್ ನಿಧನ- https://kundapraa.com/?p=37195 .

Exit mobile version