ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: 2019-20 ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕುಮಾರಿ ಸುಹಾಸಿನಿ ಆರ್. ಗೋಟ 600ಕ್ಕೆ 595 ಅಂಕ ಗಳಿಸಿ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

