Kundapra.com ಕುಂದಾಪ್ರ ಡಾಟ್ ಕಾಂ

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್: ಗೂಡ್ಸ್ ರಿಕ್ಷಾ ಚಾಲಕರಿಗೆ ಕಿಟ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್‌ನಿಂದ ಬೈಂದೂರು ಭಾಗದ ಗೂಡ್ಸ್ ರಿಕ್ಷಾ ಚಾಲಕರಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು.

ಬೈಂದೂರು ತಹಶಿಲ್ದಾರ್ ಬಸಪ್ಪ ಪೂಜಾರ್ ಕಿಟ್ ವಿತರಿಸಿದರು. ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ಎಂ. ವಿನಾಯಕ ರಾವ್, ಕಾರ್ಯನಿರ್ವಹಣಾಧಿಕಾರಿ ಸೀತರಾಮ ಮಡಿವಾಳ, ಶಾಖಾ ಪ್ರಬಂಧಕ ನಾಗರಾಜ ಪಿ. ಯಡ್ತರೆ, ಎಸ್‌ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಶಿವರಾಮ ಪೂಜಾರಿ ಯಡ್ತರೆ, ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಇದ್ದರು.

Exit mobile version