Kundapra.com ಕುಂದಾಪ್ರ ಡಾಟ್ ಕಾಂ

ದುಬೈನಿಂದ ಬಂದಿದ್ದ ಉಡುಪಿ ಜಿಲ್ಲೆಯ 5 ಮಂದಿಗೆ ಕೊರೋನಾ ಪಾಸಿಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮೇ13ರಂದು ದುಬೈನಿಂದ ಉಡುಪಿಗೆ ಆಗಮಿಸಿದ್ದ 5 ಮಂದಿಗೆ ಕೊರೋನಾ ಪಾಸಿಟಿವ್ ಇರುವ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ದೃಢಪಡಿಸಿದ್ದಾರೆ.

ದುಬೈನಿಂದ ಆಗಮಿಸಿದ ಉಡುಪಿಯ 46 ಮಂದಿಯನ್ನುಉಡುಪಿಯ ಹೋಟೆಲ್‌ನಲ್ಲಿ ಕ್ವಾರಂಟೈನಲ್ಲಿರಿಸಿ ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿ ದೊರೆತಿದ್ದು, ಐದು ಮಂದಿಗೆ ಪಾಸಿಟಿವ್ ದೃಢವಾಗಿದೆ. ಅವರನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

Exit mobile version