ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 4 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಮಂಬೈನಿಂದ ಬಂದಿದ್ದ 8 ವರ್ಷದ ಬಾಲಕ, 24 ವರ್ಷದ ಯುವತಿ, 24 ವರ್ಷದ ಯುವಕ ಹಾಗೂ 38 ವರ್ಷದ ಪುರಷನಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿದೆ. ಚಿತ್ರದುರ್ಗ ಜಿಲ್ಲೆಯಿಂದ ಚಿಕಿತ್ಸೆಗೆ ಬಂದಿದ್ದ ಕ್ಯಾನ್ಸರ್ ರೋಗಿಯಾಗಿರುವ 17 ವರ್ಷದ ಬಾಲಕಿಗೂ ಕೊರೋನಾ ಇರುವುದು ದೃಢವಾಗಿದೆ.
ಜಿಲ್ಲೆಯಲ್ಲಿ ಸದ್ಯ ಒಟ್ಟು 15 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಮೂವರು ಬಿಡುಗಡೆಯಗಿದ್ದು, ಹನ್ನೆರಡು ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.

