ಕುಂದಾಪ್ರ ಡಾಟ್ ಕಾಂ ವರದಿ.
ಕುಂದಾಪುರ: ಇಲ್ಲಿನ ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಲಕ್ಷ್ಮೀಸೋಮ ಬಂಗೇರ ಸ್ಮಾರಕ ಹೆರಿಗೆ ವಾರ್ಡ್‌ನ್ನು ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಲಾಗಿದ್ದು, 120 ರೋಗಿಗಳಿಗೆ ಚಿಕಿತ್ಸೆ ನೀಡಲು ಸಜ್ಜುಗೊಳಿಸಲಾಗಿದೆ.
ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶದಿಂದ ಸಿಂಟಮೆಟಿಕ್ ಟ್ರಿಟ್‌ಮೆಂಟ್ ಅಗತ್ಯವಿಲ್ಲದ ಪ್ರಕರಣಗಳಿಗೆ ತಾಲೂಕಿನ ಕೋವಿಡ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲು ಉದ್ದೇಶಿಸಲಾಗಿದೆ. ಈ ಸಂಬಂಧ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಸಜ್ಜುಗೊಳಿಸಲಾಗುತ್ತಿದ್ದು, ಆಸ್ಪತ್ರೆಗೆ ಅಗತ್ಯವಿರುವ ಹೆಚ್ಚುವರಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿಗಳನ್ನು ನೇಮಿಸುವ ಬಗ್ಗೆಯೂ ಜಿಲ್ಲಾಡಳಿತ ಭರವಸೆ ನೀಡಿದೆ.
ಬೈಂದೂರು ಹಾಗೂ ಕುಂದಾಪುರ ಭಾಗದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾದಲ್ಲಿ ಇಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ. ರೋಗಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯ ಕಂಡುಬಂದರೆ ಉಡುಪಿಯ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ಕೊಂಡಯ್ಯಲಾಗುತ್ತದೆ.
ಪ್ರಸ್ತುತ ಹೆರಿಗೆ ವಾರ್ಡಿನಲ್ಲಿದ್ದವರನ್ನು ಆಸ್ಪತ್ರೆಗೆ ಹಳೆಯ ಹೆರಿಗೆ ವಾರ್ಡ್‌ಗಳಿಗೆ ಸ್ಥಳಾಂತರಿಸಲಾಗಿದೆ. ಗುರುವಾರ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದಿನಿಂದಲೇ ಈ ಭಾಗದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕಂಡುಬಂದಲ್ಲಿ ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡಲು ಆರೋಗ್ಯ ಸಿಬ್ಬಂದಿಗಳ ತಂಡವೂ ಲಭ್ಯವಿದೆ ಎಂದು ಕುಂದಾಪುರ ಎಸಿ ರಾಜು ಅವರು ಮಾಹಿತಿ ನೀಡಿದ್ದಾರೆ. ಕುಂದಾಪ್ರ ಡಾಟ್ ಕಾಂ ವರದಿ.
ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಜನಪ್ರತಿನಿಧಿಗಳ ಸಹಕಾರದೊಂದಿಗೆ ಕೋರೊನಾ ವಿರುದ್ದ ಸಂಘಟನಾತ್ಮಕ ಹೋರಾಟ ಮಾಡುತ್ತಿದ್ದೇವೆ. ಪ್ರತಿಯೊಬ್ಬರ ಜೀವವೂ ಮುಖ್ಯವಾಗಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ನೀಡುವುದು ನಮ್ಮ ಮೊದಲ ಆದ್ಯತೆ. ಈ ಹಿನ್ನೆಲೆಯಲ್ಲಿ ಬೈಂದೂರು ಕುಂದಾಪುರದ ಭಾಗದಲ್ಲಿ ಐಸಿಯು, ವೆಂಟಿಲೇಟರ್ ಅಗತ್ಯವಿಲ್ಲದೇ ಚಿಕಿತ್ಸೆಗೆ ಸ್ಪಂದಿಸುವ ಕೋರೋನಾ ಪಾಸಿಟಿವ್ ಪ್ರಕರಣಗಳಿದ್ದರೇ ಅಂತವರನ್ನು ಕುಂದಾಪುರದ ಕೋವಿಡ್ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತದೆ. ಆಸ್ಪತ್ರೆಗೆ ಅಗತ್ಯವಿರುವ ಹೆಚ್ಚುವರಿ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ನೇಮಕ್ಕೆ ಕ್ರಮ ಕೈಗೊಳ್ಳಲಾಗುವುದು – ಜಿ. ಜಗದೀಶ್, ಉಡುಪಿ ಜಿಲ್ಲಾಧಿಕಾರಿ
► ಕುಂದಾಪುರದಲ್ಲಿ120 ಬೆಡ್‌ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 .
► ಮುಂಬೈನಿಂದ ನೇರ ಮನೆಗೆ ತೆರಳಿದ್ದ ವ್ಯಕ್ತಿಯನ್ನು ಕ್ವಾರಂಟೈನ್‌ಗೆ ಒಪ್ಪಿಸಿದ ಕುಟುಂಬಿಕರು – https://kundapraa.com/?p=37735 .
► ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 27 ಕೊರೋನಾ ಪಾಸಿಟಿವ್ – https://kundapraa.com/?p=37743 .
ಜಿಲ್ಲಾಧಿಕಾರಿಗಳು