Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯಲ್ಲಿ 8010 ಮಂದಿಗೆ ಕ್ವಾರಂಟೈನ್: ಕೊರೋನಾ ಪ್ರಕರಣ ಎದುರಿಸಲು ಜಿಲ್ಲಾಡಳಿತ ಸಂಪೂರ್ಣ ಸಜ್ಜು: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಜಿಲ್ಲೆಗೆ ಹೊರ ರಾಜ್ಯಗಳಿಂದ ಇದುವರೆಗೆ 8010 ಮಂದಿ ಆಗಮಿಸಿದ್ದು, ಎಲ್ಲರನ್ನೂ ಕ್ವಾರಂಟೈನ್ ಗೆ ಒಳಪಡಿಸಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕಂಡುಬರುವ ಕೋವಿಡ್ -19 ಪಾಸಿಟಿವ್ ಪ್ರಕರಣಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಜಿಲ್ಲಾಡಳಿತ ಸಂಪೂರ್ಣ ಸಜ್ಜಗೊಂಡಿದ್ದು, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಅವರು ಶನಿವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಉಡುಪಿ ಜಿಲ್ಲೆಗೆ ಇದುವರೆಗೆ , ಮಹಾರಾಷ್ಟçದಿಂದ 7226, ತಮಿಳುನಾಡು ನಿಂದ 74, ತೆಲಂಗಾಣದಿAದ 425, ಆಂಧ್ರಪ್ರದೇಶದಿAದ 43, ಗೋವಾದಿಂದ 53, ಗುಜರಾತ್ ನಿಂದ 42, ಮಧ್ಯಪ್ರದೇಶದಿಂದ 1, ದೆಹಲಿಯಿಂದ 26, ಹರಿಯಾಣದಿಂದ 1, ಚಂಡೀಗಢದಿAದ 1, ಒರಿಸ್ಸಾದಿಂದ 1, ಪಶ್ಚಿಮ ಬಂಗಾಳ 6, ರಾಜಾಸ್ಥಾನ 6, ಪಂಜಾಬ್ 12 , ಕೇರಳ 93 ಸೇರಿದಂತೆ ಒಟ್ಟು 8010 ಮಂದಿ ಅಗಮಿಸಿದ್ದು, ಇವರೆಲ್ಲರನ್ನೂ ಕ್ವಾರಂಟೈನ್ ಮಾಡಿದ್ದು, ಜಿಲ್ಲೆಯ ಬಹುತೇಕ ಕ್ವಾರಂಟೈನ್ ಕೇಂದ್ರಗಳು ಭರ್ತಿಯಾಗಿವೆ ಎಂದು ಡಿಸಿ ತಿಳಿಸಿದರು.

ಕ್ವಾರಂಟೈನ್ ಕೇಂದ್ರದಲ್ಲಿರುವವರ ಗಂಟಲು ದ್ರವದ ಮಾದರಿಯನ್ನು, ಪರೀಕ್ಷೆಗೆ ಕಳುಹಿಸಬೇಕಿದ್ದು, ಪರೀಕ್ಷಾ ವರದಿ ಬರುವವರೆಗೂ, 14 ದಿನದ ಅವಧಿ ಮುಗಿದಿದ್ದರೂ ಸಹ ಯಾರನ್ನೂ ಕೇಂದ್ರದಿAದ ಬಿಡುಗಡೆಗೊಳಿಸುವುದಿಲ್ಲ ಎಂದು ಡಿಸಿ ಜಿ.ಜಗದೀಶ್ ಸ್ಪಷ್ಟಪಡಿಸಿದರು.

ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುವ ಸಾದ್ಯತೆಯಿದ್ದು, ಇದಕ್ಕಾಗಿ ಈಗಾಗಲೇ ಇರುವ ಟಿಎಂಎ ಪೈ ಕೋವಿಡ್ ಆಸ್ಪತ್ರೆಯ ಜೊತೆಯಲ್ಲಿ ತಾಲೂಕು ಆಸ್ಪತ್ರೆ ಕುಂದಾಪುರದಲ್ಲಿ 125 ಹಾಸಿಗೆಗಳ ಕೋವಿಡ್ ಪ್ರತ್ಯೇಕ ಬ್ಕಾಲ್ ಆರಂಬಿಸಲಾಗಿದ್ದು, ತಾಲೂಕು ಆಸ್ಪತ್ರೆ ಕಾರ್ಕಳದಲ್ಲಿ 75 ಹಾಸಿಗೆಗಳ ಸೌಲಭ್ಯ, ಎಸ್.ಡಿ.ಎಂ ಉದ್ಯಾವರದಲ್ಲಿ 90 ಹಾಸಿಗೆಗಳ ಸೌಲಭ್ಯ, ಭುವನೇಂದ್ರ ಹಾಸ್ಟೆಲ್ ಕಾರ್ಕಳದಲ್ಲಿ 58 ಹಾಸಿಗೆಗಳ ಚಿಕಿತ್ಸಾ ಸೌಲಭ್ಯಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಈ ಕೇಂದ್ರಗಳಿಗೆ ಅಗತ್ಯವಿರುವ ತಜ್ಞ ವೈದ್ಯರು, ವೈದ್ಯಕೀಯ ಸಿಬ್ಬಂದಿ ಮತ್ತು ಇತರೆ ಸಿಬ್ಬಂದಿಯನ್ನು ಹೊರಗುತ್ತಿಗೆಯಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಚಿಕಿತ್ಸೆಗೆ ಅಗತ್ಯವಿರುವ ಪಿಪಿಇ ಕಿಟ್, ಮಾಸ್ಕ್ ಗಳು ಸೇರಿದಂತೆ ಎಲ್ಲಾ ವೈದ್ಯಕೀಯ ಪರಿಕರಗಳು ಸಾಕಷ್ಟು ಸಂಖ್ಯೆಯಲ್ಲಿದ್ದು, ಯಾವುದೇ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಜಿಲ್ಲೆಯಲ್ಲಿ ಪ್ರಸ್ತುತ ಕೆಎಂಸಿ ಯಲ್ಲಿ ಮಾತ್ರ ಪ್ರಯೋಗಾಲಯ ಇದ್ದು, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಮಾದರಿಯನ್ನು ಪರೀಕ್ಷೆ ಮಾಡಬೇಕಿದ್ದು, ಇದಕ್ಕಾಗಿ ಮಂಗಳೂರಿನ ವೆನ್ಲಾಕ್ , ಕೆಎಂಸಿ ಮತ್ತು ಯೆನಪೋಯ ಹಾಗೂ ಶಿವಮೊಗ್ಗ ಲ್ಯಾಬ್ ಗಳಿಗೆ ಪರೀಕ್ಷೆಗಾಗಿ ಕಳುಹಿಸಲಾಗುತ್ತಿದೆ ಎಂದು ಡಿಸಿ ಹೇಳಿದರು.

ಕ್ವಾರಂಟೈನ್ ಗಳಲ್ಲಿ ಇರುವವರು ಕೇಂದ್ರದಿAದ ಹೊರಬರುತ್ತಿರುವ ಬಗ್ಗೆ ಮಾಹಿತಿಯಿದ್ದು, ಅಂತಹವರ ವಿರುದ್ದ ಸೆಕ್ಷನ್ 188 ಪ್ರಕಾರ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು, ಪಾಸ್ ಇಲ್ಲದೇ ಜಿಲ್ಲೆಯನ್ನು ಅಕ್ರಮವಾಗಿ ಪ್ರವೇಶಿಸುವವರ ವಿರುದ್ದ ಎಫ್.ಐ.ಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್ , ಕ್ವಾರಂಟೈನ್ ಕೇಂದ್ರಗಳಲ್ಲಿರುವವರಿಗೆ ಮನೆಯಿಂದ ಊಟ ನೀಡಲು ಅವಕಾಶವಿಲ್ಲ ಆದರೆ ತೀರಾ ಅನಿವಾರ್ಯವಿದ್ದಲ್ಲಿ ಗರ್ಭಿಣಿಯರು ಮತ್ತು ಮಕ್ಕಳಿಗೆ ಡಿಸ್ಪೋಸಬಲ್ ಕಂಟೇನರ್ ಗಳಲ್ಲಿ ಮಾತ್ರ ಮನೆಯಿಂದ ಊಟ ನೀಡಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹಲೋತ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ಉಪಸ್ಥಿತರಿದ್ದರು.

ಇದನ್ನೂ ಓದಿ:
► ಉಡುಪಿಯಲ್ಲಿ 36 ಗಂಟೆಗಳ ಲಾಕ್‌ಡೌನ್: ಜಿಲ್ಲಾಧಿಕಾರಿ – https://kundapraa.com/?p=37807 .
► ಕರೆ ಮಾಡಿ ಬೆದರಿಕೆ ಹಾಕುವ ಕಿಡಿಗೇಡಿಗಳಿಗೆ ಕಾನೂನು ಕ್ರಮ – https://kundapraa.com/?p=37789 .
► ಕುಂದಾಪುರ ವಿಧಾನಸಭೆ ಕ್ಷೇತ್ರದ ಕ್ವಾರಂಟೈನ್ ಮಾಹಿತಿ-ದೂರಿಗಾಗಿ ಕಂಟ್ರೋಲ್ ರೂಂ – https://kundapraa.com/?p=37760 .
► ಕುಂದಾಪುರದಲ್ಲಿ120 ಬೆಡ್‌ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 .

 

Exit mobile version