Kundapra.com ಕುಂದಾಪ್ರ ಡಾಟ್ ಕಾಂ

ಮುಂಜಾಗೃತಾ ಕ್ರಮವಾಗಿ ಗಂಗೊಳ್ಳಿ ಪೊಲೀಸ್ ಠಾಣೆ ಸ್ಯಾನಿಟೈಸ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಮುಂಜಾಗೃತಾ ಕ್ರಮವಾಗಿ ಭಾನುವಾರ ಗಂಗೊಳ್ಳಿ ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಯಿತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಭೀಮಾಶಂಕರ ಎಸ್., ಠಾಣೆಗೆ ಆಗಮಿಸುವ ಸಾರ್ವಜನಿಕರ ಮತ್ತು ಪೊಲೀಸ್ ಸಿಬ್ಬಂದಿಯ ಹಿತರಕ್ಷಣೆಗಾಗಿ ದಾನಿಗಳ ಸಹಾಯದಿಂದ ಇಂದು ಠಾಣೆಯನ್ನು ಸಂಪೂರ್ಣ ಸ್ವಚ್ಛಗೊಳಿಸಿ ಸ್ಯಾನಿಟೈಸ್ ಮಾಡಲಾಗಿದೆ. ಠಾಣೆಗೆ ಬರುವ ಜನರಿಗೆ ಕೈತೊಳೆಯಲು ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಕೋವಿಡ್-೧೯ ವೈರಾಣು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ರಕ್ತದಾನಿ ದಿವಾಕರ ಎನ್.ಖಾರ್ವಿ ಮತ್ತು ಮತ್ಸ್ಯೋದ್ಯಮಿ ಕೆ.ಅಬ್ದುಲ್ ರೆಹಮಾನ್ ನಾಗೂರು ಠಾಣೆ ಸ್ವಾನಿಟೈನ್‌ಗೆ ತಗಲುವ ವೆಚ್ಚವನ್ನು ಭರಿಸಿದ್ದರು.

ಇದನ್ನೂ ಓದಿ:
► ಉಡುಪಿ ಜಿಲ್ಲೆಯಲ್ಲಿ ಭಾನುವಾರ 23 ಕೊರೋನಾ ಪಾಸಿಟಿವ್ – https://kundapraa.com/?p=37842 .
► ಕುಂದಾಪುರ ವಿಧಾನಸಭೆ ಕ್ಷೇತ್ರದ ಕ್ವಾರಂಟೈನ್ ಮಾಹಿತಿ-ದೂರಿಗಾಗಿ ಕಂಟ್ರೋಲ್ ರೂಂ – https://kundapraa.com/?p=37760 .
► ಕುಂದಾಪುರದಲ್ಲಿ120 ಬೆಡ್‌ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 .

Exit mobile version