ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೊರೊನಾ ಸೋಂಕು ನಿಯಂತ್ರಿಸುವ ಸಲುವಾಗಿ ಜಾರಿಯಲ್ಲಿರುವ ನಾಲ್ಕನೇ ಹಂತದ ಲಾಕ್‌ಡೌನ್‌ನಲ್ಲಿ ಕೆಲವೊಂದು ಸಡಿಲಿಕೆ ಮಾಡಲಾಗಿದ್ದು, ರಾಜ್ಯ ಸರಕಾರ ಆದೇಶಿಸಿದ ಭಾನುವಾರದ ಸಂಪೂರ್ಣ ಲಾಕ್‌ಡೌನ್‌ಗೆ ಕುಂದಾಪುರ ಹಾಗೂ ಬೈಂದೂರು ತಾಲೂಕು ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕುಂದಾಪುರ ಮತ್ತು ಬೈಂದೂರು ತಾಲೂಕಿನ ಹಲವು ಪ್ರದೇಶಗಳಲ್ಲಿ ಅಗತ್ಯ ವಸ್ತುಗಳ ಸಾಗಾಟದ ವಾಹನ ಮಾತ್ರ ಸಂಚಾರ ಮಾಡುವುದು ಕಂಡುಬಂತು. ಪೇಪರ್, ಹಾಲು, ಮಾಂಸದ ಅಂಗಡಿಗಳು ತೆರೆದಿದ್ದರೂ ಖರೀದಿಗಾಗಿ ಬರುವ ಜನಸಂಖ್ಯೆ ವಿರಳವಾಗಿತ್ತು. ಮುಸ್ಲಿಂ ಸಮುದಾಯವು ಈದ್-ಉಲ್-ಫಿತರ್ ಹಬ್ಬವನ್ನು ತಮ್ಮ ಮನೆಗಳಲ್ಲೇ ಆಚರಣೆ ಮಾಡಿದರು. ಅನುಮತಿ ನೀಡಲಾಗಿದ್ದ ವಿವಾಹ ಕಾರ್ಯಕ್ರಮಗಳು ನಡೆದವು. ಕುಂದಾಪುರ ಶಾಸ್ತ್ರೀ ವೃತ್ತ ಹಾಗೂ ಕೆಲವ ಆಯಕಟ್ಟಿನ ಸ್ಥಳಗಳಲ್ಲಿ ನಿಯಮಿತವಾದ ಪೊಲೀಸ್ ಬಂದೋವಸ್ತ್ ಮಾಡಲಾಗಿತ್ತು. ಕುಂದಾಪ್ರ ಡಾಟ್ ಕಾಂ.
ಭಾನುವಾರ ಮಧ್ಯಾಹ್ನ ಎಂದಿನಂತೆ ಬಹುತೇಕ ಅಂಗಡಿಗಳು ಬಂದ್ ಮಾಡುವುದರಿಂದ ಸಂಪೂರ್ಣ ಲಾಕ್‌ಡೌನ್‌ನನ್ನು ಜನರು ಸಹಜವಾಗಿಯೇ ಸ್ವೀಕರಿಸಿದ್ದಾರೆ. ಪ್ರಸ್ತುತ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದ್ದು ಕೆಲವೊಂದು ಸಡಿಲಿಕೆಯನ್ನು ಮಾಡಲಾಗಿದೆ. ಭಾನುವಾರ ಮಾತ್ರ ಸಂಪೂರ್ಣ ಲಾಕ್‌ಡೌನ್‌ಗೆ ರಾಜ್ಯ ಸರ್ಕಾರ ಆದೇಶಿಸಿದೆ/ಕುಂದಾಪ್ರ ಡಾಟ್ ಕಾಂ/
ಇದನ್ನೂ ಓದಿ:
► ಮುಂಜಾಗೃತಾ ಕ್ರಮವಾಗಿ ಗಂಗೊಳ್ಳಿ ಪೊಲೀಸ್ ಠಾಣೆ ಸ್ಯಾನಿಟೈಸ್ – https://kundapraa.com/?p=37856 .
► ಉಡುಪಿ ಜಿಲ್ಲೆಯಲ್ಲಿ ಭಾನುವಾರ 23 ಕೊರೋನಾ ಪಾಸಿಟಿವ್ – https://kundapraa.com/?p=37842 .
► ಕುಂದಾಪುರ ವಿಧಾನಸಭೆ ಕ್ಷೇತ್ರದ ಕ್ವಾರಂಟೈನ್ ಮಾಹಿತಿ-ದೂರಿಗಾಗಿ ಕಂಟ್ರೋಲ್ ರೂಂ – https://kundapraa.com/?p=37760 .
► ಕುಂದಾಪುರದಲ್ಲಿ120 ಬೆಡ್‌ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 .