Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿನ ಹಂಚಿನ ಕಾರ್ಖಾನೆಯಲ್ಲಿ ಮಲೇರಿಯಾ ಮಾಸಾಚರಣೆ

ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯಾಧಿಕಾರಿ ಉಡುಪಿ ಮತ್ತು ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಉಡುಪಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇವರ ಆಶ್ರಯದಲ್ಲಿ ಮಲೇರಿಯಾ ಮಾಸಾಚರಣೆ ಕಾರ್ಯಕ್ರಮ ಶುಕ್ರವಾರ ಗಂಗೊಳ್ಳಿ ಟೈಲ್ ವರ್ಕ್ಸ್ ಕಂ. ವಠಾರದಲ್ಲಿ ಜರಗಿತು.

ಕಾರ್ಖಾನೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿ ಮಾತನಾಡಿದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶ್ವೇತಾ, ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಸರದ ನೈರ್ಮಲ್ಯ ಕಾಪಾಡಿಕೊಳ್ಳಬೇಕಾದುದು ಅತಿ ಮುಖ್ಯ. ಇತ್ತೀಚಿನ ಕೆಲವು ದಿನಗಳಲ್ಲಿ ಮಲೇರಿಯಾ, ಡೆಂಗ್ಯೂ ಪ್ರಕರಣಗಳು ದಾಖಲಾಗುತ್ತಿದ್ದು, ಇದು ಹರಡದಂತೆ ಮುನ್ನಚ್ಚೆರಿಕೆ ವಹಿಸಬೇಕು ಎಂದು ಕರೆ ನೀಡಿದ ಅವರು, ಮಲೇರಿಯಾ, ಡೆಂಗ್ಯೂ, ಫೈಲೇರಿಯಾ ಮೊದಲಾದ ರೋಗಗಳು ಹರಡುವ ವಿಧಾನ ಹಾಗೂ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿಯರಾದ ಗಿರಿಜಾ ನಾಯ್ಕ್, ಅರ್ಪಿತಾ, ಪ್ರಜ್ವಲಾ, ಕುಸುಮಾ, ಕಾರ್ಖಾನೆಯ ಕಛೇರಿ ಸಿಬ್ಬಂದಿಗಳಾದ ಎನ್.ನಾರಾಯಣ ನಾಯಕ್, ಬಿ.ಪ್ರಕಾಶ ಪಡಿಯಾರ್, ಎನ್.ರವೀಂದ್ರ ನಾಯಕ್ ಹಾಗೂ ಕಾರ್ಖಾನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version