Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆ: ಬುಧವಾರ 62 ಕೊರೋನಾ ಪಾಸಿಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.3ರ ಬುಧವಾರದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 62 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲಾ ಪಾಸಿಟಿವ್ ಪ್ರಕರಣಗಳು ಮಹಾರಾಷ್ಟ್ರದಿಂದ ಬಂದವರಾಗಿದ್ದು, ಈ ಪೈಕಿ ನಾಲ್ವರು ಮಕ್ಕಳು ಸೇರಿದ್ದಾರೆ.

ನಿನ್ನೆ ಒಂದೇ ದಿನ ಉಡುಪಿ ಜಿಲ್ಲೆಯಲ್ಲಿ 150 ಸೋಂಕು ಪ್ರಕರಣಗಳು ದೃಢವಾಗಿತ್ತು. ನಿನ್ನೆ ಜಿಲ್ಲೆಯಲ್ಲಿ 410 ಒಟ್ಟು ಪ್ರಕರಣವಿದ್ದರೆ ಇಂದು 472 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 472 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 85 ಮಂದಿ ಬಿಡುಗಡೆಯಾಗಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. 387 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಸದ್ಯ ಒಟ್ಟು 63 ಕಂಟೈನ್ಮೆಂಟ್ ಝೋನ್ ಮಾಡಲಾಗಿದ್ದು, 4,500ಕ್ಕೂ ಅಧಿಕ ವರದಿಗಳು ಬರುವುದು ಬಾಕಿ ಇದೆ.

ಇದನ್ನೂ ಓದಿ:
► ಕ್ವಾರಂಟೈನ್ ಸಮಯದಲ್ಲಿ ತಪ್ಪು ವಿಳಾಸ ನೀಡಿದಲ್ಲಿ ಕ್ರಮ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=38242 .
► ಉಡುಪಿ ಜಿಲ್ಲೆಯಲ್ಲಿ ಶೀಘ್ರ ಸರ್ಕಾರಿ ಕೋವಿಡ್ ಪರೀಕ್ಷಾ ಲ್ಯಾಬ್: ಡಾ. ಸುಧಾಕರ್ – https://kundapraa.com/?p=38214 .
► ಶಂಕರನಾರಾಯಣ ಪೊಲೀಸ್ ಸಿಬ್ಬಂದಿಗೆ ಎರಡನೇ ವರದಿಯಲ್ಲಿ ಕೊರೋನಾ ನೆಗೆಟಿವ್ – https://kundapraa.com/?p=38184 .
► ಹೆಚ್ಚುತ್ತಿರುವ ಕೊರೋನಾ ಸೋಂಕು, ಆತಂಕ. ಜಿಲ್ಲಾಡಳಿತದ ಕೈಮೀರುತ್ತಿದೆಯೇ ಕೊರೋನಾ ನಿಯಂತ್ರಣ? – https://kundapraa.com/?p=38142 .

 

Exit mobile version