Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆ: ಗುರುವಾರ 92 ಕೊರೋನಾ ಪಾಸಿಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.4ರ ಗುರುವಾರದ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 92 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಎಲ್ಲಾ ಪ್ರಕರಣಗಳು ಮಂಬೈನಿಂದ ಹಿಂದಿರುಗಿರುವ ಹಿನ್ನೆಲೆ ಹೊಂದಿದ್ದಾರೆ. ಈ ಪೈಕಿ 78 ಪುರುಷರು, 13 ಮಹಿಳೆಯರು ಹಾಗೂ 1 ಮಗು ಸೇರಿದೆ. ಒಂದು ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದೆ.

ಜಿಲ್ಲೆಯಲ್ಲಿ ಸದ್ಯ ಒಟ್ಟು 563 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 108 ಮಂದಿ ಬಿಡುಗಡೆಯಾಗಿದ್ದು, ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. 454 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:

ಕೋವಿಡ್ ಪ್ರಕರಣ ನಿಭಾಯಿಸುವಲ್ಲಿ ಬೈಂದೂರು ತಾಲೂಕಿನಲ್ಲಿ ನಿರ್ಲಕ್ಷ್ಯ ಧೊರಣೆ: ಬ್ಲಾಕ್ ಕಾಂಗ್ರೆಸ್ ನಿಯೋಗ ಖಂಡನೆ – https://kundapraa.com/?p=38258 .
► ಕುಂದಾಪುರ ತಾಲೂಕಿನ 24, ಬೈಂದೂರು ತಾಲೂಕಿನ 15 ಕಡೆಗಳಲ್ಲಿ ಸೀಲ್‌ಡೌನ್ – https://kundapraa.com/?p=38263 .

Exit mobile version