Site icon Kundapra.com ಕುಂದಾಪ್ರ ಡಾಟ್ ಕಾಂ

ಪೊಲೀಸ್ ಕಾನ್ಸ್ಟೇಬಲ್ ಹುದ್ದೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪೊಲೀಸ್ ಇಲಾಖೆಯಲ್ಲಿ 2020-21 ನೇ ಸಾಲಿನ ನೇಮಕಾತಿಗೆ ಸಂಬOದಿಸಿದOತೆ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿ ಸಂಬOದ ಅರ್ಜಿ ಆಹ್ವಾನಿಸಲಾಗಿದ್ದು, ಪ್ರಸಕ್ತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ, ಈ ಹಿಂದೆ ನಿಗಧಿಪಡಿಸಿದ್ದ ಅರ್ಜಿ ಆಹ್ವಾನದ ದಿನಾಂಕಗಳನ್ನು ಮಾತ್ರ ವಿಸ್ತರಿಸಲಾಗಿದೆ. ಇನ್ನುಳಿದಂತೆ ಅರ್ಹತಾ ಷರತ್ತುಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ (ವಯೋಮಿತಿ ಸೇರಿ) ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

ಎ.ಪಿ.ಸಿ 444 ಹುದ್ದೆ ಮತ್ತು ಸಿ.ಪಿ.ಸಿ 558 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮರು ನಿಗಧಿಗೊಳಿಸಲಾದ ಕೊನೆಯ ದಿನಾಂಕ ಜುಲೈ 9 ಆಗಿದ್ದು, ಶುಲ್ಕ ಪಾವತಿಸಲು ಜುಲೈ 13 ಕೊನೆಯ ದಿನಾಂಕವಾಗಿದೆ. ಸಿ.ಪಿ.ಸಿ 2007 ಮತ್ತು ಎ.ಪಿ.ಸಿ 1005 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮರು ನಿಗಧಿಗೊಳಿಸಲಾದ ಕೊನೆಯ ದಿನಾಂಕ ಜುಲೈ 13 ಆಗಿದ್ದು, ಶುಲ್ಕ ಪಾವತಿಸಲು ಜುಲೈ 15 ಕೊನೆಯ ದಿನಾಂಕವಾಗಿದೆ. ಸ್ಟೇ ಆರ್.ಪಿ.ಸಿ 252 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮರು ನಿಗಧಿಗೊಳಿಸಲಾದ ಕೊನೆಯ ದಿನಾಂಕ ಜುಲೈ 6 ಆಗಿದ್ದು, ಶುಲ್ಕ ಪಾವತಿಸಲು ಜುಲೈ 8 ಕೊನೆಯ ದಿನಾಂಕವಾಗಿದೆ.

 

Exit mobile version