Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಎಪಿಎಂಸಿ: ಅಧ್ಯಕ್ಷರಾಗಿ ವೆಂಕಟ ಪೂಜಾರಿ, ಉಪಾಧ್ಯಕ್ಷರಾಗಿ ವಸಂತ ಕುಮಾರ್ ಶೆಟ್ಟಿ ಆಯ್ಕೆ

ಕುಂದಾಪ್ರ ಡಾಟ್ ಕಾಂ‌ ಸುದ್ದಿ.
ಕುಂದಾಪುರ: ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ) ನೂತನ ಅಧ್ಯಕ್ಷರಾಗಿ ವೆಂಕಟ ಪೂಜಾರಿ ಸಸಿಹಿತ್ಲು, ಉಪಾಧ್ಯಕ್ಷರಾಗಿ ಹೆಚ್. ವಸಂತ ಕುಮಾರ್ ಶೆಟ್ಟಿ ಕೆದೂರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜೂ.15ರಂದು ನಡೆದ ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಈ ಅವಿರೋಧ ಆಯ್ಕೆ ನಡೆಯಿತು.

ಒಟ್ಟು 16 ಸದಸ್ಯ ಬಲವನ್ನು ಹೊಂದಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಈಗ 10 ಬಿಜೆಪಿ, 6 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ಸರ್ಕಾರ ಇತ್ತೀಚೆಗೆ ಮೂರು ಜನ ಸದಸ್ಯರನ್ನು ನಾಮ ನಿರ್ದೇಶನ ಮಾಡಿತ್ತು. ಇಂದು ನಡೆದ  ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಸಾಧಿಸಿದ್ದಾರೆ. ಈ ಹಿಂದೆ ಎಪಿಎಂಸಿ ಕಾಂಗ್ರೆಸ್ ತೆಕ್ಕೆಯಲ್ಲಿತ್ತು.

ಕುಂದಾಪುರ ತಹಶೀಲ್ದಾರ್ ಕೆ. ಆನಂದಪ್ಪ ನಾಯ್ಕ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಕಿರಣ್ ಕೊಡ್ಗಿ, ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ,  ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕಕುಮಾರ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಭಾಸ್ಕರ ಬಿಲ್ಲವ ಹಾಗೂ ಮಾಜಿ ಸದಸ್ಯ ಮಂಜು ಬಿಲ್ಲವ ಅಭಿನಂದಿಸಿದ್ದಾರೆ.

ನೂತನ ಅಧ್ಯಕ್ಷರಾದ ವೆಂಕಟ ಪೂಜಾರಿ ಮಾತನಾಡಿ, ಮುಂದಿನ ದಿನಗಳಲ್ಲಿ ಕೃಷಿ ಉತ್ಪನ್ನ ಸಮಿತಿಯ ಮೂಲಕ ರೈತರಿಗೆ ಇನ್ನಷ್ಟು ಅನುಕೂಲ ಕಲ್ಪಿಸಿಕೊಡುವುದಾಗಿ ತಿಳಿಸಿದರಲ್ಲದೇ, ಆಯ್ಕೆ ಪ್ರಕ್ರಿಯೆಯಲ್ಲಿ ಸಹಕರಿಸಿದ ಕುಂದಾಪುರ ಕ್ಷೇತ್ರ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಬೈಂದೂರು ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:
► ಎಸ್.ಎಸ್.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ, ಪೋಷಕರು ಆತಂಕ ಪಡುವ ಅಗತ್ಯವಿಲ್ಲ: ಡಿಸಿ ಜಿ. ಜಗದೀಶ್ – https://kundapraa.com/?p=38630 .
► ಮರವಂತೆ: ರಕ್ಷಾ ಪಂಚಕ ಕಿಟ್ ಲೋಕಾರ್ಪಣೆ – https://kundapraa.com/?p=38634 .

 

Exit mobile version