Site icon Kundapra.com ಕುಂದಾಪ್ರ ಡಾಟ್ ಕಾಂ

ಕ್ರೀಡಾ ಇಲಾಖೆಯಿಂದ ಪ್ರಶಸ್ತಿ: ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: 2019ನೇ ಸಾಲಿಗೆ ರಾಷ್ಟ್ರ ಮತ್ತು ಅಂತರಾಷ್ಟ್ರ ಮಟ್ಟದಲ್ಲಿ ಅಸಾಧಾರಣ ಸಾಧನೆ ಮಾಡಿದ ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳ/ಹಿರಿಯ ಕ್ರೀಡಾಪಟುಗಳ/ತರಬೇತುದಾರರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನೀಡಲಾಗುವ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಮತ್ತು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದ್ದು, ಅರ್ಹ ಕ್ರೀಡಾಪಟುಗಳು ನಿಗದಿತ ಅವಧಿಯೊಳಗೆ https://sevasindhu.karnataka.gov.in ನಲ್ಲಿ ತಮ್ಮ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಡಾ|ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ (0820-2521324, 9480886467) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

 

Exit mobile version