Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆ ಕೋವಿಡ್ ಅಪ್ಡೇಟ್: ಗುರುವಾರ 14 ಪಾಸಿಟಿವ್ ದೃಢ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜೂ.25ರ ಗುರುವಾರ 14 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢವಾಗಿದೆ. ಇವುಗಳಲ್ಲಿ 10 ಪ್ರಕರಣ ಮಹಾರಾಷ್ಟ್ರದಿಂದ ಹಿಂದಿರುಗಿದವರದ್ದಾಗಿದ್ದು, 4 ಪ್ರಕರಣ ಸ್ಥಳೀಯ ಸಂಪರ್ಕದಿಂದ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ನಾಲ್ವರು ಪುರುಷರು, ಏಳು ಮಹಿಳೆಯರು ಹಾಗೂ ಮೂವರು ಮಕ್ಕಳ ಸೇರಿದ್ದಾರೆ.

ಈ ತನಕ ಒಟ್ಟು 13,840ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,336ನೆಗೆಟಿವ್, 1,116 ಪಾಸಿಟಿವ್ ಬಂದಿದ್ದು, 388 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 103 ನೆಗೆಟಿವ್, 14 ಪಾಸಿಟಿವ್ ಬಂದಿದೆ.

94 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಸದ್ಯ ಒಟ್ಟು 1,116ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1020 ಮಂದಿ ಬಿಡುಗಡೆಯಾಗಿದ್ದು, 94  ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

Exit mobile version