Kundapra.com ಕುಂದಾಪ್ರ ಡಾಟ್ ಕಾಂ

ಅರೆಹೊಳೆ ಸರ್ಕಾರಿ ಶಾಲಾ ನೂತನ ಕಟ್ಟಡದ ಶಂಕು ಸ್ಥಾಪನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನಾವುಂದ ಗ್ರಾಮದ ಅರೆಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಶಂಕು ಸ್ಥಾಪನೆಯನ್ನು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಂಗಳವಾರ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾನ್ವಿತ ಶಿಕ್ಷಕರ ಪಡೆ ಇದೆ. ಅವರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಈಚಿನ ದಿನಗಳಲ್ಲಿ ಶಾಲೆಗಳ ಮೂಲ ಸೌಕರ್ಯಗಳನ್ನು ಉತ್ತಮಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಮಕ್ಕಳ ಸಂಖ್ಯೆ ಹೆಚ್ಚುವ ಭರವಸೆ ಇದೆ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯ ನಾರಾಯಣ ದೇವಾಡಿಗ ಸ್ವಾಗತಿಸಿದರು. ಸಹಶಿಕ್ಷಕಿ ಶೈಲಾ ನಿರೂಪಿಸಿದರು. ಯೋಗ ಶಿಕ್ಷಕ ಸುಬ್ಬ ದೇವಾಡಿಗ ವಂದಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶ್ಯಾಮಲಾ ಕುಂದರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಗೌರಿ ದೇವಾಡಿಗ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಯಂತಿ, ಹೇರೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಶೋಕಕುಮಾರ ಶೆಟ್ಟಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕರುಣಾಕರ ಶೆಟ್ಟಿ, ಸ್ಥಳ ದಾನಿ ಕುಟುಂಬದ ಮಹಾದೇವ ಮಂಜ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರಿಶ್ಚಂದ್ರ ಆಚಾರ್ಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿ. ಡಿ. ರಾಜು, ಗಣೇಶೋತ್ಸವ ಸಮಿತಿ ಅಧ್ಯಕ್ಷ ಉಮೇಶ ಕುಂದರ್, ಶಿಕ್ಷಕಿಯರಾದ ವನಿತಾ ಆಲ್ಮೇಡ, ಗೌರಿ, ಸವಿತಾ ಬಾಡ್ಕರ್, ಕೃಪಾ ಇದ್ದರು.

Exit mobile version