ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.1ರ ಬುಧವಾರ 22 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.
ಇಂದು 218 ನೆಗೆಟಿವ್:
ಈ ತನಕ ಒಟ್ಟು 14,819 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 13,194 ನೆಗೆಟಿವ್, 1,228 ಪಾಸಿಟಿವ್ ಬಂದಿದ್ದು, 397 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 218 ನೆಗೆಟಿವ್, 22 ಪಾಸಿಟಿವ್ ಬಂದಿದೆ. ಜಿಲ್ಲೆಯಲ್ಲಿ ಸದ್ಯ 961 ಮಂದಿಯನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.
156 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 1,228 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1069 ಮಂದಿ ಬಿಡುಗಡೆಯಾಗಿದ್ದು, 156 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ.
ಇದನ್ನೂ ಓದಿ:
► ಬೈಂದೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದ ಉಪ್ಪುಂದದ ವಿದ್ಯಾರ್ಥಿನಿಗೆ ಕೋರೋನಾ ಪಾಸಿಟಿವ್ – https://kundapraa.com/?p=39141 .