Site icon Kundapra.com ಕುಂದಾಪ್ರ ಡಾಟ್ ಕಾಂ

ಪಡುವರಿ ಪಂಚಾಯತ್ ಸೀಲ್‌ಡೌನ್. ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಹಿನ್ನೆಲೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ತಾಲೂಕಿನ ಪಡುವರಿ ಗ್ರಾಮ ಪಂಚಾಯತ್ ಸಿಬ್ಬಂದಿಯೋರ್ವರಿಗೆ ಶುಕ್ರವಾರ ಕೋರೊನಾ ಪಾಸಿಟಿವ್ ದೃಢವಾಗಿದ್ದು, ಪಂಚಾಯತಿಯನ್ನು ಸೀಲ್‌ಡೌನ್ ಮಾಡಲಾಗಿದೆ.

ಗ್ರಾಮ ಪಂಚಾಯತಿಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಇಂದು ಪಾಸಿಟಿವ್ ದೃಢಪಟ್ಟಿದ್ದು, ಪಂಚಾಯತಿ ಸೀಲ್‌ಡೌನ್ ಮಾಡಿ ಎಲ್ಲಾ ಸಿಬ್ಬಂದಿಗಳಿಗೆ ಸಿಬ್ಬಂದಿಗಳಿಗೆ ಹೋಂ ಕ್ವಾರಂಟೈನ್‌ಗೆ ಸೂಚಿಸಲಾಗಿದೆ. ಸೋಂಕಿತ ವ್ಯಕ್ತಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಸೋಂಕಿನ ಮೂಲ ಹಾಗೂ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಪತ್ತೆ ಮಾಡಿ ಕ್ವಾರಂಟೈನ್ ಮಾಡುವ ಕಾರ್ಯದಲ್ಲಿ ಆರೋಗ್ಯ ಸಿಬ್ಬಂದಿಗಳು ನಿರತರಾಗಿದ್ದಾರೆ.  ಕುಂದಾಪ್ರ ಡಾಟ್ ಕಾಂ.

ಪ್ರಾಥಮಿಕ ಸಂಪರ್ಕಕ್ಕೆ ಬಂದವರ ಗಂಟಲು ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗುತ್ತದೆ. ಪಂಚಾಯತಿಯನ್ನು ಸ್ಯಾನಿಟೈನ್ ಮಾಡಿ ಮೂರು ದಿನಗಳ ಬಳಿಕ ಪುನರಾರಂಭಿಸಲಾಗುತ್ತದೆ ಎನ್ನಲಾಗಿದೆ/ಕುಂದಾಪ್ರ ಡಾಟ್ ಕಾಂ ಸುದ್ದಿ/

ಇದನ್ನೂ ಓದಿ:
► ಕುಂದಾಪುರ ತಾಲೂಕಿನ 44 ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ – https://kundapraa.com/?p=39187 .
► ಬೈಂದೂರು ತಾಲೂಕಿನ 16 ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ – https://kundapraa.com/?p=39183 .

Exit mobile version