Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಸೋಮವಾರ 40 ಪಾಸಿಟಿವ್ ದೃಢ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.6ರ ಸೋಮವಾರ 40 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಹೋಟೆಲ್ ಸಿಬ್ಬಂದಿ, ಅಂಗಡಿ ಮಾಲೀಕರ ಕುಟುಂಬ, ಬಸ್ ಚಾಲಕ ಕರೋನಾ ಸೋಂಕು ತಗುಲಿದ್ದು ಸಮುದಾಯಕ್ಕೆ ಹಬ್ಬುವ ಭೀತಿ ಎದುರಾಗಿದೆ.

ಕೋಟದಲ್ಲಿರುವ ಹೋಟೆಲ್ ಮತ್ತು ಅಂಗಡಿ ಮಾಲೀಕರಿಗೆ ಕೋವಿಡ್ ದೃಢಗೊಂಡಿದ್ದು, ಹೊಟೇಲ್ ಮತ್ತು ಅಂಗಡಿಯನ್ನು ಸೀಲ್ ಡೌನ್ ಮಾಡಲಾಗಿದೆ.

ಇಂದು 466 ನೆಗೆಟಿವ್:
ಈ ತನಕ ಒಟ್ಟು 18,542 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 15,540 ನೆಗೆಟಿವ್, 1,362 ಪಾಸಿಟಿವ್ ಬಂದಿದ್ದು, 1,640 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 466 ನೆಗೆಟಿವ್, 40 ಪಾಸಿಟಿವ್ ಬಂದಿದೆ. ಒಟ್ಟು 1126 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.

205 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 1,362 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1154 ಮಂದಿ ಬಿಡುಗಡೆಯಾಗಿದ್ದು, 205 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

ಇದನ್ನೂ ಓದಿ:
► ಕುಂದಾಪುರ: ಮೂವರು ಬಸ್ ಚಾಲಕರಿಗೆ ಕೋವಿಡ್ ಸೋಂಕು – https://kundapraa.com/?p=39305 .

 

Exit mobile version